ಹೈದರಾಬಾದ್: ಅಕ್ರಮ ಸಂಬಂಧದ ವಿಚಾರ ಪತಿಗೆ ತಿಳಿಯುತ್ತಿದ್ದಂತೆ ಮಹಿಳೆ ತಾನು ಸಂಬಂಧ ಹೊಂದಿದ್ದ ಯುವಕನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ವನಪರ್ತಿ ಜಿಲ್ಲೆಯಲ್ಲಿ ನಡೆದಿದೆ.
ದೇವಮ್ಮ (30) ಮತ್ತು ಶಿವ ನಾಯಕ್ (20) ಆತ್ಮಹತ್ಯೆ ಮಾಡಿಕೊಂಡವರು. ಸಂಬಂಧದಲ್ಲಿ ಅಳಿಯನಾಗಬೇಕಿದ್ದ ಯುವಕನೊಂದಿಗೆ ಮಹಿಳೆ ಅನೈತಿಕ ಸಂಬಂಧ ಹೊಂದಿದ್ದಳು. ಈ ವಿಚಾರ ಪತಿಗೆ ತಿಳಿಯುತ್ತಿದ್ದಂತೆ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
https://www.facebook.com/105350550949710/posts/182529756565122/?sfnsn=wiwspwa&extid=lWaxzjRYmeP37MlU&d=w&vh=e
ಮೃತ ದೇವಮ್ಮ 10 ವರ್ಷಗಳ ಹಿಂದೆ ರಾಜು ಜೊತೆ ಮದುವೆಯಾಗಿದ್ದಳು. ಈ ದಂಪತಿಗೆ ಮೂವರು ಮಕ್ಕಳಿದ್ದಾರೆ. ದೇವಮ್ಮ ಪತಿ ರಾಜು ಚಾಲಕನಾಗಿ ಕೆಲಸ ಮಾಡುತ್ತಿದ್ದು, ಕುಟುಂಬವನ್ನು ನೋಡಿಕೊಳ್ಳುತ್ತಿದ್ದನು. ಈ ನಡುವೆ ದೇವಮ್ಮ 20 ವರ್ಷದ ಶಿವ ನಾಯಕ್‍ನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಶಿವ ನಾಯಕ್ ಸಂಬಂಧದಲ್ಲಿ ದೇವಮ್ಮಗೆ ಅಳಿಯನಾಗಬೇಕಿತ್ತು.
ಪತಿ ಇಲ್ಲದ ಸಮಯದಲ್ಲಿ ದೇವಮ್ಮ ಪ್ರಿಯಕರ ಶಿವ ನಾಯಕ್‍ನನ್ನು ಮನೆಗೆ ಕರೆಯಿಸಿಕೊಳ್ಳುತ್ತಿದ್ದಳು. ನಂತರ ಇಬ್ಬರು ಅನೈತಿಕ ಸಂಬಂಧ ಹೊಂದುತ್ತಿದ್ದರು. ಇತ್ತೀಚೆಗೆ ಇಬ್ಬರು ಏಕಾಂತದಲ್ಲಿದ್ದ ವೇಳೆ ದೇವಮ್ಮ ಪತಿ ರಾಜು ಮನೆಗೆ ಆಗಮಿಸಿದ್ದಾನೆ. ಈ ವೇಳೆ ಇಬ್ಬರ ಅನೈತಿಕ ಸಂಬಂಧ ಬೆಳಕಿಗೆ ಬಂದಿದೆ. ನಂತರ ಪತಿಗೆ ವಿಷಯ ತಿಳಿಯುತ್ತಿದ್ದಂತೆ ದೇವಮ್ಮ ತನ್ನ ಪ್ರಿಯಕರ ಶಿವ ನಾಯಕ್ ಜೊತೆ ಮನೆಯಿಂದ ಓಡಿ ಹೋಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರು ಪಕ್ಕದ ಗ್ರಾಮದ ಹೊರವಲಯಕ್ಕೆ ತೆರಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವೇಳೆ ಸ್ಥಳೀಯರು ಇಬ್ಬರು ಪ್ರಜ್ಞೆಹೀನರಾಗಿ ಬಿದ್ದಿರುವುದನ್ನು ಕಂಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ದೇವಮ್ಮ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.
ಶಿವ ನಾಯಕ್ ಸ್ಥಿತಿ ಗಂಭೀರವಾಗಿದ್ದ ಕಾರಣ ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೆಹಬೂಬ್ ನಗರ ಖಾಸಗಿ ಆಸ್ಪತ್ರೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಶಿವ ನಾಯಕ್ ಸಾವನ್ನಪ್ಪಿದ್ದಾನೆ. ಈ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.