Breaking News
Home / Uncategorized / ಸತೀಶ ಜಾರಕಿಹೊಳಿ ಕಾಂಗ್ರೆಸ್ ಆಹ್ವಾನದ ಬಗ್ಗೆ ಅಶೋಕ್ ಪೂಜಾರಿ ಹೇಳಿದ್ದೇನು..?

ಸತೀಶ ಜಾರಕಿಹೊಳಿ ಕಾಂಗ್ರೆಸ್ ಆಹ್ವಾನದ ಬಗ್ಗೆ ಅಶೋಕ್ ಪೂಜಾರಿ ಹೇಳಿದ್ದೇನು..?

Spread the love

ನನ್ನ ರಾಜಕೀಯ ಗಾಡಫಾದರ್ ಎಚ್.ಡಿ.ದೇವೇಗೌಡರು, ಅದೇ ರೀತಿ ಎಚ್‍ಡಿ ಕುಮಾರಸ್ವಾಮಿ ಅವರು ಕೂಡ ನನ್ನ ನಾಯಕರು. ಅವರ ಮೇಲೆ ನನಗೆ ವಿಶೇಷ ಗೌರವ, ಅಭಿಮಾನವಿದೆ. ಇಲ್ಲಿ ಏನೇ ಬೆಳವಣಿಗೆ ಆದ್ರೂ ಕೂಡ ಅವರ ಗಮನಕ್ಕೆ ತಂದು ಅವರ ಜೊತೆ ಮಾತನಾಡಿ, ಹಿರಿಯ ಮುಖಂಡರು, ಕಾರ್ಯಕರ್ತರ ಸಲಹೆ ಸೂಚನೆ ಮೇರೆಗೆ ನನ್ನ ಮುಂದಿನ ರಾಜಕೀಯ ನಡೆಯಾಗಿರುತ್ತದೆ ಎಂದು ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ ಸ್ಪಷ್ಟಪಡಿಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ತಮ್ಮ ಮನೆಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ನೀಡಿರುವ ಕುರಿತು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸತೀಶ ಜಾರಕಿಹೊಳಿ ಅವರು ಗೋಕಾಕ್ ತಾಲೂಕಿನ ವೀರಶೈವ ಮುಖಂಡರು, ಸೇರಿದಂತೆ ಎಲ್ಲರನ್ನು ಪಕ್ಷಕ್ಕೆ ಆಹ್ವಾನಿಸುತ್ತಿದ್ದೇವೆ. ಅದೇ ರೀತಿ ನಿಮ್ಮನ್ನು ಅಧಿಕೃತವಾಗಿ ಆಹ್ವಾನಿಸಲು ಆಗಮಿಸಿದ್ದೇನೆ.

ಗೋಕಾಕ್ ವ್ಯವಸ್ಥೆ ವಿರುದ್ಧ ನಡೆದಿರುವ ನಿಮ್ಮ ಹೋರಾಟ ನಮ್ಮ ಹೋರಾಟ ಒಂದೇ ಆಗಿದೆ. ಹೀಗಾಗಿ ನಮ್ಮ ನಿಮ್ಮ ವಿಚಾರಧಾರೆ ಒಂದೇ ಆಗಿರೋದರಿಂದ ಎಲ್ಲರೂ ಕೂಡಿ ಹೊಸ ಅಧ್ಯಾಯ ಆರಂಭಿಸೋಣ ಎಂದು ಹೇಳಿದ್ದಾರೆ. ಆದ್ದರಿಂದ ಕಳೆದ ನಾಲ್ಕು ಚುನಾವಣೆಗಳಲ್ಲಿ ನನ್ನ ಪರವಾಗಿ ದುಡಿದಿರುವ ನನ್ನ ಮುಖಂಡರು, ಕಾರ್ಯಕರ್ತರ ಅಭಿಪ್ರಾಯದ ಮೇರೆಗೆ ನನ್ನ ಮುಂದಿನ ರಾಜಕೀಯ ನಡೆಯಾಗಿರುತ್ತದೆ ಎಂದು ಅವರಿಗೆ ತಿಳಿಸಿದ್ದೇನೆ ಎಂದು ಹೇಳಿದರು.

ಕಾಂಗ್ರೆಸ್‍ನಿಂದ ಬೆಳಗಾವಿ ಬೈಎಲೆಕ್ಷನ್ ಟಿಕೆಟ್ ನಿಮಗೆ ಕೊಡುತ್ತಾರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಯಿಸಿದ ಅಶೋಕ್ ಪೂಜಾರಿ ನಾನು ಈಗ ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ. ಅಧಿಕೃತವಾಗಿ ನಾನು ಜೆಡಿಎಸ್ ಪಕ್ಷದಲ್ಲಿದ್ದೇನೆ. ಜೆಡಿಎಸ್ ಪಕ್ಷದ ಸದಸ್ಯನಾಗಿದ್ದೇನೆ, ಹೀಗಾಗಿ ನನಗೆ ಕಾಂಗ್ರೆಸ್ ಟಿಕೆಟ್ ಕೊಡುವ ಪ್ರಶ್ನೆಯೇ ಇಲ್ಲ ಎಂದರು.


Spread the love

About Laxminews 24x7

Check Also

ಕೊಲೆಯಾದ ನೇಹಾ ಹಿರೇಮಠ ತಂದೆಗೆ ಪೊಲೀಸ್ ಭದ್ರತೆ

Spread the love ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಮೃತಳ ತಂದೆ ನಿರಂಜನಯ್ಯ ಹಿರೇಮಠ ಅವರಿಗೆ ಪೊಲೀಸ್ ಭದ್ರತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ