Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಅಂತ್ಯಕ್ರಿಯೆ ಮಾಡಲು ಜನರಿಗೆ ತೊಂದರೆಆದರೆ ತಹಶೀಲ್ದಾರ್ ಮನೆ ಮುಂದೆ ಶವ ತಂದು ಇಡುತ್ತೇವೆ: ಉಮೇಶ ಕತ್ತಿ

ಅಂತ್ಯಕ್ರಿಯೆ ಮಾಡಲು ಜನರಿಗೆ ತೊಂದರೆಆದರೆ ತಹಶೀಲ್ದಾರ್ ಮನೆ ಮುಂದೆ ಶವ ತಂದು ಇಡುತ್ತೇವೆ: ಉಮೇಶ ಕತ್ತಿ

Spread the love

ಚಿಕ್ಕೋಡಿ: ಅಂತ್ಯಕ್ರಿಯೆ ಮಾಡಲು ಜನರಿಗೆ ತೊಂದರೆ ಆಗಬಾರದು. ತೊಂದರೆ ಆದರೆ ತಹಶೀಲ್ದಾರ್ ಮನೆ ಮುಂದೆ ಶವ ತಂದು ಇಡುತ್ತೇವೆ ಎಂದು ಹುಕ್ಕೇರಿ ಶಾಸಕ ಉಮೇಶ ಕತ್ತಿ ಹುಕ್ಕೇರಿ ತಹಶೀಲ್ದಾರ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ತಾಲೂಕು ಪಂಚಾಯತಿ ಸಭಾ ಭವನದಲ್ಲಿ ಆಯೋಜಿಸಿದ್ದ ಕೊರೊನಾ ನಿಗ್ರಹ ಸಭೆಯಲ್ಲಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ಅಂತ್ಯಕ್ರಿಯೆ ಮಾಡಲು ಯಾವುದೇ ಸಮಸ್ಯೆ ಆಗಬಾರದು. ಸರ್ಕಾರಿ ಜಮೀನುಗಳಿದ್ದರೆ ಅವುಗಳನ್ನು ಸ್ಮಶಾನಗಳಿಗಾಗಿ ಮೀಸಲಿಡಬೇಕು ಎಂದು ಹೇಳಿದರು.

ಜಮೀನುಗಳು ಇಲ್ಲದ ಗ್ರಾಮಗಳ ಅಧಿಕಾರಿಗಳು ಜಮೀನು ಖರೀದಿ ಮಾಡಲು ಪ್ರಸ್ತಾವನೆ ಸಲ್ಲಿಸಬೇಕು. ಸ್ಮಶಾನ ಜಾಗ ಇಲ್ಲದೆ ಜನ ತೊಂದರೆ ಅನುಭವಿಸಬಾರದು ಎಂದು ಅಧಿಕಾರಿಗಳಿಗೆ ಉಮೇಶ ಕತ್ತಿ ಎಚ್ಚರಿಕೆ ನೀಡಿದರು. ಅಲ್ಲದೆ ಗ್ರಾಮಗಳನ್ನು ಬಿಟ್ಟು ತೋಟದಲ್ಲಿ ವಾಸಿಸುವ ಜನರಿಗೆ ರಸ್ತೆ ವ್ಯವಸ್ಥೆ ಹಾಗೂ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಕೊಡುವಂತೆ ಅಧಿಕಾರಿಗಳಿಗೆ ಉಮೇಶ ಕತ್ತಿ ಸೂಚಿಸಿದರು.

ಸಭೆ ಬಳಿಕ ಮಾತನಾಡಿದ ಉಮೇಶ ಕತ್ತಿ ಅವರು, ನನ್ನ ಮಂತ್ರಿ ಮಾಡೋದು ಬಿಡೋದು ಸಿಎಂ ವಿವೇಚನೆಗೆ ಬಿಟ್ಟ ವಿಚಾರವಾಗಿದೆ. ಸಂಪುಟ ವಿಸ್ತರಣೆ ಬಗ್ಗೆ ನನಗೆ ಮಾಹಿತಿ ಇಲ್ಲ. ನನಗೆ ಸಚಿವನಾಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಚಿವನಾಗಿ ಮಾಡಿದರೆ ಸ್ವಾಗತ ಮಾಡುತ್ತೇನೆ ಸದ್ಯ ಶಾಸಕನಾಗಿ ಜನ ಸೇವೆ ಮಾಡುತ್ತಾ ಕ್ಷೇತ್ರದಲ್ಲಿದ್ದೇನೆ ಎಂದು ತಿಳಿಸಿದರು.

 

 

 


Spread the love

About Laxminews 24x7

Check Also

ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ಚಾನ್ಸೇ ಇಲ್ಲ

Spread the love ಹಾವೇರಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಎಲ್ಲಾ ಪಕ್ಷದ ನಾಯಕರುಗಳು ಅಭ್ಯರ್ಥಿಗಳು ಪರಸ್ಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ