Breaking News

ವ್ಯಾಪಾರದಲ್ಲಿ ಬಂದ ಹಣವನ್ನೆಲ್ಲ ಪೆಟ್ಟಿಗೆಯಲ್ಲಿ ತುಂಬಿಟ್ಟ ಪರಿಣಾಮ ಲಕ್ಷಾಂತರ ರೂಪಾಯಿ ಗೆದ್ದಲು ಹಿಡಿದು ಹಾಳಾಗಿರುವ ಘಟನೆ

Spread the love

ಹೈದರಾಬಾದ್: ವ್ಯಾಪಾರದಲ್ಲಿ ಬಂದ ಹಣವನ್ನೆಲ್ಲ ಬ್ಯಾಂಕ್ ನಲ್ಲಿ ಠೇವಣಿಯಿಡದೇ ಪೆಟ್ಟಿಗೆಯಲ್ಲಿ ತುಂಬಿಟ್ಟ ಪರಿಣಾಮ ಲಕ್ಷಾಂತರ ರೂಪಾಯಿ ಗೆದ್ದಲು ಹಿಡಿದು ಹಾಳಾಗಿರುವ ಘಟನೆ ಹೈದರಾಬಾದ್ ನಲ್ಲಿ ಬೆಳಕಿಗೆ ಬಂದಿದೆ.

ಮೈಲಾವರಂ ನಿವಾಸಿ ಬಿಜ್ಲಿ ಚಾಮಲಯ್ಯ ಹಂದಿ ವ್ಯಾಪಾರಿಯಾಗಿದ್ದು, ತಾವು ದುಡಿದ ಹಣವನ್ನೆಲ್ಲ ಬ್ಯಾಂಕ್ ನಲ್ಲಿಡದೇ ಶೇಖರಿಸಿ ಪೆಟ್ಟಿಗೆಯಲ್ಲಿ ತುಂಬಿಟ್ಟಿದ್ದಾರೆ. ಹಣ ಸುರಕ್ಷಿತವಾಗಿದೆಯೇ ಎಂಬುದನ್ನೂ ನೋಡಿಲ್ಲ. ವರ್ಷದ ಬಳಿಕ ಪೆಟ್ಟಿಗೆ ತೆಗೆದು ನೋಡಿದಾಗ ಇದೀಗ ಹಣ ಗೆದ್ದಲು ತಿಂದು ನಾಶವಾಗಿದೆ. ಇದರಿಂದ ಬೇಜಾರಾದ ಚಾಮಲಯ್ಯ, ಚೂರಾದ ಹಣವನ್ನು ತೆಗೆದುಕೊಂಡು ಹೋಗಿ ರಸ್ತೆಯಲ್ಲಿ ಆಟವಾಡುತ್ತಿದ್ದ ಮಕ್ಕಳಿಗೆ ಹಂಚಿದ್ದಾರೆ.

ಚಿಕ್ಕ ಚಿಕ್ಕ ಮಕ್ಕಳು ದುಡ್ಡು ಹಿಡಿದುಕೊಂಡು ಆಟವಾಡುತ್ತಿರುವುದನ್ನು ಕಂಡ ಪೊಲೀಸರು ವಿಚಾರಿಸಿದಾಗ ಈ ವಿಷಯ ಬಹಿರಂಗವಾಗಿದೆ.


Spread the love

About Laxminews 24x7

Check Also

ಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ!

Spread the loveಬಾಗಲಕೋಟೆ: ನಿಯಂತ್ರಣ ತಪ್ಪಿ ಎಥಿನಾಲ್ ಲಾರಿ ಪಲ್ಟಿ; ಅಧಿಕಾರಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ! ಬಾಗಲಕೋಟೆ ಜಿಲ್ಲೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ