Breaking News
Home / ರಾಜ್ಯ / ತಂಬಾಕು ಮಾರಾಟಕ್ಕೂ ಕಡ್ಡಾಯ ಪರವಾನಿಗಿ ನೀಡಿ

ತಂಬಾಕು ಮಾರಾಟಕ್ಕೂ ಕಡ್ಡಾಯ ಪರವಾನಿಗಿ ನೀಡಿ

Spread the love

ಬೆಂಗಳೂರು, ಫೆ.17- ರಾಜ್ಯದಲ್ಲಿ ತರಕಾರಿ, ಹಾಲು ಮಾರಾಟ ಮಳಿಗೆ ಮತ್ತು ಬೇಕರಿಯಂತಹ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳು ಸಿಗುತ್ತಿರುವುದು ಆತಂಕಕಾರಿಯಾಗಿದೆ ಎಂದು ಕರ್ನಾಟಕ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ. ಪತ್ರಿಕೆಗೋಷ್ಠಿಯಲ್ಲಿ ಮಾತನಾಡಿದ ಅವರು, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿಗಳಿಗೆ ಕಡ್ಡಾಯವಾಗಿ ಪರವಾನಗಿ ನೀಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದ ಅವರು, ಮದ್ಯದ ಅಂಗಡಿಗಳಿಗೆ ಪರವಾನಗಿ ಇರುವಂತೆ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡ್ಡಾಯ ಪರವಾನಗಿ ನೀಡಬೇಕು ಎಂದು ಒತ್ತಾಯಿಸಿದರು.ಅಪ್ರಾಪ್ತರಿಗೆ ಮತ್ತು ವಿದ್ಯಾರ್ಥಿಗಳಿಗೆ ತಂಬಾಕು ಉತ್ಪನ್ನಗಳು ಸಿಗದಂತೆ ಆರೋಗ್ಯ ಮತ್ತು ಪೊಲೀಸ್ ಇಲಾಖೆ ಸೂಕ್ತ ನಿಯಮಗಳನ್ನು ಜಾರಿಗೆ ತಂದು ವಿದ್ಯಾರ್ಥಿಗಳು ಚಟದಿಂದ ದೂರವಾಗಲು ಸಹಕರಿಸಬೇಕು ಎಂದು ತಿಳಿಸಿದರು. ರಾಜ್ಯದಲ್ಲಿ ತಂಬಾಕು ಉತ್ಪನ್ನಗಳಿಗೆ ಕಡಿವಾಣ ಹಾಕಲು ಶೀಘ್ರ ಹೊಸ ಕಾನೂನು ಜಾರಿಗೆ ತರುವಂತೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಅವರಿಗೆ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು 3000ಕ್ಕೂ ಹೆಚ್ಚು ಪತ್ರಗಳನ್ನು ಬರೆಯುವ ಮೂಲಕ ಮನವಿ ಮಾಡಲಾಗಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಹುಬ್ಬಳ್ಳಿ-ಧಾರವಾಡದ ಜನ ಹೊರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಗೆ ಜಗದೀಶ್​​ ಶೆಟ್ಟರ್‌ ಕೊಡುಗೆ ಏನು? ಲಕ್ಷ್ಮೀ ಹೆಬ್ಬಾಳ್ಕರ್

Spread the love  ಬೆಳಗಾವಿಯಲ್ಲಿ ಮಾತನಾಡಿದ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇದು ನನ್ನ ಕರ್ಮ ಭೂಮಿ ಅಂದ್ರೆ ಸುಮ್ಮನಿರಬೇಕಾ? …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ