Breaking News

ಕೃಷಿ ಕಾಯ್ದೆ ವಿರೋಧಿಸಿ “ರೈಲ್ ರೋಖೋ” ಚಳುವಳಿ, ಪ್ರತಿಭಟನಾಕಾರರು ವಶಕ್ಕೆ

Spread the love

: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟಿಸುತ್ತಿರೋ ರೈತರು ಇಂದು ದೇಶಾದ್ಯಂತ ರೈಲ್ ರೋಕೋ ಚಳವಳಿಗೆ ಕರೆ ನೀಡಿದ್ದಾರೆ. ಈ ಹಿನ್ನೆಲೆ ವಿಜಯಪುರ ಕೇಂದ್ರ ರೈಲ್ವೇ ನಿಲ್ದಾಣದಲ್ಲಿ ಹಲವಾರು ರೈತರು ರೈಲು ತಡೆಯಲು ಮುಂದಾಗಿದ್ದು, ಅವರನ್ನ ಪೊಲೀಸರು ಬಂಧಿಸಿದ್ದಾರೆ.

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತರಿಗೆ ವಿಜಯಪುರ ರೈತರು ಬೆಂಬಲ ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ರೈತರು, ಕಾರ್ಮಿಕ ಸಂಘಟನೆಗಳು ಸೇರಿ ವಿಜಯಪುರದಲ್ಲಿ ರೈಲ್​ ರೊಕೋ ಚಳವಳಿಗೆ ಮುಂದಾಗಿದ್ದವು. ಆದ್ರೆ ಇಂದು ಬೆಳಗ್ಗೆ ರೇಲ್ವೆ ನಿಲ್ದಾಣಕ್ಕೆ ಆಗಮಿಸಿದ ರೈತರು ನಿಲ್ದಾಣದ ಒಳಗೆ ಪ್ರವೇಶಿಸದಂತೆ ಪೊಲೀಸರು ತಡೆದಿದ್ದು, ಪ್ರವೇಶ ದ್ವಾರಕ್ಕೆ ಬ್ಯಾರಿಕೇಡ್ ಹಾಕಿದ್ದಾರೆ.

ಸ್ಥಳದಲ್ಲಿ ಒಂದು ಡಿಎಆರ್​ ತುಕಡಿ, ಓರ್ವ ಸಿಪಿಐ, ಮೂವರು ಪಿಎಸ್‌ಐ ಹಾಗೂ ಮೂವತ್ತಕ್ಕೂ ಹೆಚ್ಚು ಪೊಲೀಸ್​ ಸಿಬ್ಬಂದಿಯನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ. ರೈಲ್ವೇ ನಿಲ್ದಾಣದ ಎದುರು ರೈತ ಗೀತೆ ಹಾಡುವುದರ ಮೂಲಕ ಹೋರಾಟಗಾರರು ಪ್ರತಿಭಟನೆಗೆ ಚಾಲನೆ ನೀಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಬಸವ ಎಕ್ಸ್​ಪ್ರೆಸ್ ರೈಲು​ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಪೊಲೀಸರ ಕಾವಲಿನ ನಡುವೆಯೂ ಪ್ರತಿಭಟನಾಕಾರರು ರೈಲನ್ನ ತಡೆಯಲು ಮುಂದಾದ್ರು. ಈ ಸಮಯದಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ತಳ್ಳಾಟ ನೂಕಾಟ ನಡೆದಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ತಿರಂಗ ಯಾತ್ರೆಯಲ್ಲಿ ಗಮನ ಸೆಳೆದ ಈಸೂರು ದಂಗೆಯ ಸ್ತಬ್ಧಚಿತ್ರ

Spread the loveಶಿವಮೊಗ್ಗ: ನಗರದ  ಶೀನಪ್ಪಶೆಟ್ಟಿ ವೃತ್ತದಲ್ಲಿ ಸ್ವಾತಂತ್ರ್ಯೋತ್ಸವ  ಅಂಗವಾಗಿ ಬಿಜೆಪಿ ವತಿಯಿಂದ ರಾಮಣ್ಣಶ್ರೇಷ್ಟಿ ಪಾರ್ಕ್‌ನಿಂದ ಗೋಪಿ ವೃತ್ತದವರೆಗೆ ತಿರಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ