ಯಾದಗಿರಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಈ ಹಿನ್ನೆಲೆ ಜಿಲ್ಲಾದ್ಯಂತ ಕಠಿಣ ಲಾಕ್‍ಡೌನ್ ಘೋಷಣೆ ಮಾಡಲಾಗಿದೆ. ಕಳೆದ 15ರಂದು ಲಾಕ್‍ಡೌನ್ ಆರಂಭವಾಗಿದ್ದು, ಆಗಲೇ 5 ದಿನ ಕಳೆದಿದೆ. ಆದರೂ ಜನತೆ ಬೇಕಾಬಿಟ್ಟಿಯಾಗಿ ಓಡಾಡುತ್ತಿದ್ದು, ಅಂತಹವರಿಗೆ ಪೊಲೀಸರು ಲಾಠಿ ರುಚಿ ತೋರಿಸುತ್ತಿದ್ದಾರೆ.
ಲಾಕ್‍ಡೌನ್ ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಪೊಲೀಸರು ಹರಸಾಹಸ ಪಡುವಂತಾಗಿದೆ. ಫುಲ್ ಅಲರ್ಟ್ ಆಗಿದ್ದಾರೆ. ಮಾಸ್ಕ್ ಇಲ್ಲದೆ ಬೇಕಾಬಿಟ್ಟಿಯಾಗಿ ನಗರದಲ್ಲಿ ತಿರುಗಾಟ ನಡೆಸಿದವರಿಗೆ ದಂಡ ಜೊತೆಗೆ ಲಾಠಿ ರುಚಿ ತೋರಿಸಿ ವಾಪಸ್ ಮನೆಗೆ ಕಳುಹಿಸುತ್ತಿದ್ದಾರೆಸಾಮಾಜಿಕ ಅಂತರವಿಲ್ಲದೆ, ಕೊರೊನಾ ಲಾಕ್‍ಡೌನ್ ನಿಯಮಗಳನ್ನು ಪಾಲಿಸದೆ, ಅಗತ್ಯ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳಿಗೂ ದಂಡ ಹಾಕಿ ಬಿಸಿ ಮುಟ್ಟಿಸುತ್ತಿದ್ದಾರೆ. ಇಷ್ಟಾದರೂ ಜನ ಮಾತ್ರ ಪಾಠ ಕಲಿತಿಲ್ಲ.