Breaking News

ದನ ಮೇಯಿಸುತ್ತಿದ್ದ ರೈತ ಮಹಿಳೆಯೊಬ್ಬರ ಮೇಲೆ ಕಾಡುಹಂದಿ ದಾಳಿ

Spread the love

ಖಾನಾಪುರ: ತಾಲೂಕಿನ ಭೀಮಗಡ ವನ್ಯಧಾಮದ ಗವ್ವಾಳಿ ಗ್ರಾಮದ ಹೊರವಲಯದಲ್ಲಿ ದನ ಮೇಯಿಸುತ್ತಿದ್ದ ರೈತ ಮಹಿಳೆಯೊಬ್ಬರ ಮೇಲೆ ಕಾಡುಹಂದಿ ದಾಳಿ ನಡೆಸಿದ ಘಟನೆ ಗುರುವಾರ ಮಧ್ಯಾಹ್ನ ಜರುಗಿದೆ.

ಗವ್ವಾಳಿ ಗ್ರಾಮದ ಸಾವಿತ್ರಿ ಬಾಬು ಗಾವಡಾ (೭೬) ಅವರ ಮೇಲೆ ಹಿಂದಿನಿಂದ ದಾಳಿ ನಡೆಸಿದ ಕಾಡುಹಂದಿ ಅವರ ಮೊಣಕಾಲು ಮತ್ತು ಸೊಂಟದ ಭಾಗವನ್ನು ತನ್ನ ಹರಿತವಾದ ಮುಳ್ಳಿನಿಂದ ತಿವಿದು ಗಾಯಗೊಳಿಸಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ತೆರಳಿದ ಭೀಮಗಡ ಉಪ ವಲಯ ಅರಣ್ಯ ಅಧಿಕಾರಿ ಮಲ್ಲೇಶಪ್ಪ ನಂದೆಪ್ಪಗೋಳ ಹಾಗೂ ಸಿಬ್ಬಂದಿ ಇಲಾಖೆಯ ವಾಹನದಲ್ಲಿ ಅವರನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಸಾವಿತ್ರಿ ಅವರಿಗೆ ಚಿಕಿತ್ಸೆ ನೀಡಿ ಅವರ ಗಾಯಗಳಿಗೆ ಹೊಲಿಗೆ ಹಾಕಲಾಗಿದ್ದು, ಅವರು ಸಧ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಚಿಕಿತ್ಸೆ ನೀಡಿರುವ ವೈದ್ಯ ಡಾ.ನಾರಾಯಣ ವಡ್ಡೀನ ತಿಳಿಸಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ