Breaking News

ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು

Spread the love

ಬೆಂಗಳೂರು: ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ನಗರದ ವಿವಿಧೆಡೆಯ ಸೋಮವಾರ ಐದು ಎಸ್​ಎಸ್​ಎಲ್​ಸಿ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿ ಮೌಲ್ಯಮಾಪನ ಪ್ರಕ್ರಿಯೆಯನ್ನು ವೀಕ್ಷಿಸಿದರು, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯಾದ್ಯಂತ 220 ಮೌಲ್ಯಮಾಪನ ಕೇಂದ್ರದಲ್ಲಿ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದೆ. ಇದರಲ್ಲಿ ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನು ಎರಡು ದಿನಗಳಲ್ಲಿ 180 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಮುಗಿಯಲಿದೆ. ಬೆಂಗಳೂರು ಮಹಾನಗರದ 28 ಕೇಂದ್ರಗಳಲ್ಲಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಮೌಲ್ಯಮಾಪನಕ್ಕೆ ಶೇ. 45ರಷ್ಟು ಶಿಕ್ಷಕರು ಹಾಜರಾಗಿದ್ದು, ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ಮೌಲ್ಯಮಾಪನ ನಡೆಯುತ್ತಿದೆ ಎಂದರು.

ಇನ್ನು 10 ದಿನಗಳಲ್ಲಿ ರಾಜ್ಯದ ಎಲ್ಲ ಕೇಂದ್ರಗಳ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, 8.5 ಲಕ್ಷ ವಿದ್ಯಾರ್ಥಿಗಳ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸುವ ಆಲೋಚನೆ ಹೊಂದಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.


Spread the love

About Laxminews 24x7

Check Also

ವೀರಶೈವ-ಲಿಂಗಾಯತ ಒಬಿಸಿ ಸೇರ್ಪಡೆಗೆ ಒತ್ತಾಯ

Spread the love ಬೆಂಗಳೂರು: ಜಾತಿ ಗಣತಿ (ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ) ವರದಿಯನ್ನು ಮುಂದಿನ ಸಚಿವ ಸಂಪುಟದಲ್ಲಿ ಕೈಗೆತ್ತಿಕೊಳ್ಳಲು ಸರಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ