Breaking News

ಮಹಾರಾಷ್ಟ್ರದಲ್ಲಿ ಕೊರೋನಾ 2ನೇ ಅಲೆ ಆರಂಭ,ಮತ್ತೆ ಯಲ್ಲಮ್ಮ, ಮಾಯಕ್ಕ ದರ್ಶನ ಅನಿರ್ಧಿಷ್ಠಾವಧಿಗೆ ಬಂದ್

Spread the love

ಬೆಳಗಾವಿ – ಮಹಾರಾಷ್ಟ್ರದಲ್ಲಿ ಮತ್ತೆ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಮತ್ತು ಚಿಂಚಲಿ ಮಾಯಕ್ಕೆ ದರ್ಶನವನ್ನು ನಿಷೇಧಿಸಲಾಗಿದೆ.

 

10 ತಿಂಗಳ ನಂತರ ಕಳೆದ ಫೆ.1ರಿಂದ ಈ ದೇವಸ್ಥಾನಗಳಿಗೆ ಭಕ್ತರ ಪ್ರವೇಶ ಆರಂಭವಾಗಿತ್ತು. ಆದರೆ ಇದೀಗ ಪುನಃ ದೇವರ ದರ್ಶನ ನಿಷೇಧಿಸಿ ಜಿಲ್ಲಾಧಿಕಾರಿಗಳು  ಆದೇಶ ಹೊರಡಿಸಿದ್ದಾರೆ. ಮುಂದಿನ ಆದೇಶದವರೆಗೂ ಈ ನಿರ್ಬಂಧ ಮುಂದುವರಿಯಲಿದೆ.

ಸವದತ್ತಿ ಯಲ್ಲಮ್ಮ ಮತ್ತು ಚಿಂಚಲಿ ಮಾಯಕ್ಕ ದರ್ಶನಕ್ಕೆ ಮಹಾರಾಷ್ಟ್ರದಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಹಾಗಾಗಿ ಮಹಾರಾಷ್ಟ್ರದಲ್ಲಿ ಕೊರೋನಾ 2ನೇ ಅಲೆ ಆರಂಭವಾಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.


Spread the love

About Laxminews 24x7

Check Also

ಕ್ರಾಂತಿ ಮಹಿಳಾ ಮಂಡಳ, ಉಮಾ ಸಂಗೀತ ಪ್ರತಿಷ್ಠಾನದಿಂದ ಸ್ವಾತಂತ್ರ್ಯ ದಿನಾಚರಣೆ ಮಕ್ಕಳಿಗೆ ದೇಶಾಭಿಮಾನ ಬೆಳೆಸಿ: ಸಂತೋಷ್ ಮಠಪತಿ

Spread the love ಬೆಳಗಾವಿ: ಪ್ರಾಥಮಿಕ ಹಂತದಲ್ಲೆ ಮಕ್ಕಳಿಗೆ ದೇಶಾಭಿಮಾನ ಬೆಳೆಸಿ, ದೇಶದ ಉತ್ತಮ ನಾಗರಿಕನನ್ನಾಗಿ ಮಾಡುವ ಜವಾಬ್ದಾರಿ ಪೋಷಕರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ