Breaking News

16 ಸಾವಿರ ಪೊಲೀಸ್ ಹುದ್ದೆ ಭರ್ತಿ: ಬಸವರಾಜ ಬೊಮ್ಮಾಯಿ

Spread the love

ಉಡುಪಿ: ಮುಂದಿನ 3 ವರ್ಷಗಳ ಅವಧಿಯಲ್ಲಿ ಒಟ್ಟು 16 ಸಾವಿರ ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನೂತನ ಪೊಲೀಸ್ ವಸತಿ ಗೃಹ ಸಮುಚ್ಚಯ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ 6 ಸಾವಿರ ಪೊಲೀಸ್ ಹುದ್ದೆಗಳ ಭರ್ತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಮುಂದಿನ 3 ವರ್ಷಗಳ ಅವಧಿಯಲ್ಲಿ ಒಟ್ಟು 16 ಸಾವಿರ ಪೊಲೀಸ್ ಹುದ್ದೆ ಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು. ಇದರಿಂದ ಪೊಲೀಸ್ ಬಲ ಮತ್ತಷ್ಟು ಹೆಚ್ಚಲಿದೆ. ಈಗಿರುವ ನೇಮಕಾತಿ ಪ್ರಕ್ರಿಯೆ ಅತ್ಯಂತ ಪಾರದರ್ಶಕ ವಾಗಿದೆ. ಮಾನವ ಮಧ್ಯಸ್ಥಿಕೆ ಇಲ್ಲದ ರೀತಿ ನೇಮಕಾತಿ ಪ್ರಕ್ರಿಯೆ ಮಾಡುತ್ತಿದ್ದೇವೆ ಎಂದು ಸಚಿವರು ಹೇಳಿದರು.

ಡಾರ್ಕ್ ವೆಬ್ ಮೂಲಕ ಜನರನ್ನು ಸಂಪರ್ಕಿಸಿ ಡ್ರಗ್ ಪೂರೈಕೆ ಮಾಡುತ್ತಿದ್ದ ಅಂತಾರಾಷ್ಟ್ರೀಯ ಜಾಲವನ್ನು ದೇಶದಲ್ಲಿ ಮೊಟ್ಟ ಮೊದಲು ಮಟ್ಟ ಹಾಕಿದ್ದು ಕರ್ನಾಟಕ ಪೊಲೀಸ್. ಇದು ನಿಜಕ್ಕೂ ಹೆಮ್ಮೆಯ ವಿಷಯ ಎಂದು ಸಚಿವರು ಹೇಳಿದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ