Breaking News

ಶಿವರಾಜ ತಂಗಡಗಿಯಂಥ ಪ್ರಾಮಾಣಿಕ, ಸತ್ಯಹರಿಶ್ಚಂದ್ರರಂತಿರುವ ವ್ಯಕ್ತಿಯನ್ನು ನಾನು ಇದುವರೆಗೂ ನೋಡೇ ಇಲ್ಲ.:

Spread the love

ಕೊಪ್ಪಳ: ಮಾಜಿ ಸಚಿವ, ಕಾಂಗ್ರೆಸ್‌ನ ಕೊಪ್ಪಳ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿಯಂಥ ಪ್ರಾಮಾಣಿಕ, ಸತ್ಯಹರಿಶ್ಚಂದ್ರರಂತಿರುವ ವ್ಯಕ್ತಿಯನ್ನು ನಾನು ಇದುವರೆಗೂ ನೋಡೇ ಇಲ್ಲ. ಅದಕ್ಕೆ ಜನ ಅವರನ್ನ ಎಲ್ಲಿಡಬೇಕೋ ಅಲ್ಲೇ ಇಟ್ಟಿದ್ದಾರೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ‌.ಪಾಟೀಲ ಹೇಳಿದರು.

ಕೊಪ್ಪಳದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಮಾಲೆ‌ ಕಣ್ಣಿನವರಿಗೆ ಕಾಣೋದೆಲ್ಲ ಹಳದಿನೇ. ಅವರು ಈ ಹಿಂದೆ ಮಾಡಿದ್ದನ್ನ ಪದೇ ಪದೇ ನಮಗೆ ಅನ್ವಯಿಸಿ ಹೇಳುತ್ತಿದ್ದಾರೆ. ಜನ ಈಗಾಗಲೇ ಅವರಿಗೆ ತಕ್ಕ ಉತ್ತರ ಕೊಟ್ಟು ಅವರ ಸ್ಥಾನ ಏನು ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.

ರಾಜ್ಯದಲ್ಲಿ ದಿನೇ ದಿನೇ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿವೆ. ಕೊಪ್ಪಳ ಜಿಲ್ಲೆಯಲ್ಲೂ ಪ್ರಕರಣಗಳು ಜಾಸ್ತಿ ಆಗ್ತಿವೆ. ಕಾಯಿಲೆ ಯಾರನ್ನೂ ಬಿಡಲ್ಲ, ಮಾಧ್ಯಮದವರನ್ನೂ, ಜನಪ್ರತಿನಿಧಿಗಳನ್ನೂ ಬಿಡಲ್ಲ. ಕಾಯಿಲೆ ನಿಯಂತ್ರಣ ನಿಟ್ಟಿನಲ್ಲಿ ಇಂದು ಅಧಿಕಾರಿಗಳ ಸಭೆ ನಡೆಸುತ್ತೇನೆ. ಕ್ವಾರಂಟೈನ್ ಸೆಂಟರ್, ಆಸ್ಪತ್ರೆ, ಚಿಕಿತ್ಸೆ ಕುರಿತ ಸಮಸ್ಯೆಗಳಿದ್ದರೆ ಪರಿಹರಿಸುವ ಕುರಿತು ಸಮಾಲೋಚನೆ ನಡೆಸಲಾಗುವುದು ಎಂದರು.

ಈ ವೇಳೆ ಸಂಸದ ಸಂಗಣ್ಣ ಕರಡಿ, ಶಾಸಕ ಬಸವರಾಜ ದಢೇಸೂಗೂರು, ಬಿಜೆಪಿ ಮುಖಂಡರು ಇದ್ದರು.


Spread the love

About Laxminews 24x7

Check Also

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಮಗ್ರ ಸಿದ್ಧತೆ:D.C.

Spread the loveಬೆಳಗಾವಿ: ರಾಜ್ಯಾದ್ಯಂತ ಮಾರ್ಚ್ 21 ರಿಂದ ಏಪ್ರಿಲ್ 04 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಜಿಲ್ಲೆಯಲ್ಲಿ ಪರೀಕ್ಷೆಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ