Breaking News

ಎಂಬಿಬಿಎಸ್​ ವಿದ್ಯಾರ್ಥಿನಿ ಸಾವಿನ ಮನೆಯ ಕದ ತಟ್ಟಿದ್ದೇಕೆ?

Spread the love

ಬಾಗಲಕೋಟೆ: ನಗರದ ಮೆಡಿಕಲ್​ ಕಾಲೇಜಿನಲ್ಲಿ ಓದುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಸಂಭವಿಸಿದೆ.

ಸಿ.ಎಸ್.ಸಿಂಧುರೇಖಾ(25) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಬಾಗಲಕೋಟೆಯ ನವನಗರದ ಕುಮಾರೇಶ್ವರ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ಓದುತ್ತಿದ್ದಳು. ಕಾಲೇಜು ಆವರಣದಲ್ಲಿ ಬಾಡಿಗೆ ಮನೆಯಲ್ಲಿ ಪೋಷಕರೊಂದಿಗೆ ನೆಲೆಸಿದ್ದ ಸಿಂಧುರೇಖಾ, ತಡರಾತ್ರಿ ಸಾವಿನ ಮನೆಯ ಕದ ತಟ್ಟಿದ್ದಾಳೆ.

ಸಿಂಧುರೇಖಾ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು ಎನ್ನಲಾಗಿದೆ. ತನಿಖೆ ಬಳಿಕ ನಿಖರ ಕಾರಣ ತಿಳಿಯಲಿದೆ. ಈಕೆಯ ಜತೆ ವಾಸವಿದ್ದ ಪೋಷಕರು ಬೆಂಗಳೂರಿಗೆ ತೆರಳಿದ್ದ ವೇಳೆ ನಿನ್ನೆ ರಾತ್ರಿ ನೇಣಿಗೆ ಶರಣಾಗಿದ್ದಾಳೆ. ನವನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ