Breaking News

ಬೇಡ ಜಂಗಮ ಸಮಾಜಕ್ಕೆ ಜಾತಿ ಪ್ರಮಾಣ ಪತ್ರಕ್ಕೆ ಒತ್ತಾಯ

Spread the love

ಬೆಳಗಾವಿ: ಆರ್ಥಿಕವಾಗಿ ಹಾಗೂ ಶೈಕ್ಷಣೀಕವಾಗಿ ಹಿಂದುಳಿದ ಬೇಡ ಜಂಗಮ ಸಮಾಜಕ್ಕೆ ಜಾತಿ ಪ್ರಮಾಣ ಪತ್ರ ನೀಡಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಅಖಿಲ ಭಾರತ ಜಂಗಮ ಮಹಾಸಭಾದ ರಾಜ್ಯಾಧ್ಯಕ್ಷ ಅರುಣಕುಮಾರ ಜಡಿಮಠ ಎಚ್ಚರಿಕೆ ನೀಡಿದ್ದಾರೆ.

ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದ್ದ ಅಖಿಲ ಭಾರತ ಜಂಗಮ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕದ ಉದ್ಘಾಟನೆ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಲವು ದಶಕಗಳಿಂದ ಸಾಂವಿಧಾನಿಕವಾಗಿ ಸಿಗಬೇಕಾದ ಜಾತಿ ಪ್ರಮಾಣ ಪತ್ರವನ್ನು ನೀಡದೇ ಅನ್ಯಾಯ ಮಾಡಲಾಗುತ್ತಿದೆ. ಇದರಿಂದ ಬೇಡ ಜಂಗಮರು ಆರ್ಥಿಕವಾಗಿ, ಶೈಕ್ಷಣಿಕವಾಗಿ ತೀರಾ ಹಿಂದುಳಿಯುವಂತಾಗಿದೆ. ಆದ್ದರಿಂದ ಜಾತಿ ಪ್ರಮಾಣ ಪತ್ರ ನೀಡಬೇಕು. ಬೇಡ ಜಂಗಮ ಸಮಾಜಕ್ಕೆ ಜಾತಿ ಪ್ರಮಾಣ ನೀಡದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಕಾರ್ಯಕ್ರಮ ರೂಪಿಸಲಾಗುವುದು ಎಂದು ಮುಖಂಡರು ಎಚ್ಚರಿಕೆ ನೀಡಿದರು.

ಬೇಡ ಜಂಗಮ ಜಾತಿ ಪ್ರಮಾಣ ಪತ್ರ ನೀಡಬೇಕು ಎಂದು ಕಳೆದ 70ವರ್ಷಗಳಿಂದ ಹೋರಾಟ ಮಾಡುತ್ತ ಬರಲಾಗಿದೆ. ಆದರೆ ಇದುವರೆಗೂ ಫಲ ಸಿಕ್ಕಿಲ್ಲ. ಜಂಗಮ ಸಮಾಜ ಎಲ್ಲ ರೀತಿಯಿಂದ ಹಿಂದುಳಿದಿದ್ದು, ಮೀಸಲಾತಿಗೆ ಅರ್ಹವಾಗಿದ್ದರೂ ರಾಜಕೀಯ ಧುರೀಣರ ಮನೋಭಾವದಿಂದ ಮೀಸಲಾತಿ ಸಾಧ್ಯವಾಗಿಲ್ಲ. ಸಮಾಜಕ್ಕೆ ಮೀಸಲಾತಿ ದೊರೆಯದಿದ್ದರೆ ಹೋರಾಟ ತೀವ್ರಗೊಳ್ಳುವುದು ನಿಶ್ಚಿತ ಎಂದರು.

ಬೇಡ ಜಂಗಮ ಸಮಾಜದ ಮುಖಂಡ ಚಂದ್ರಶೇಖರ ಸವಡಿ ಸಾಲಿಮಠ ಮಾತನಾಡಿ, ಬೇಡ ಜಂಗಮ ಸಮಾಜಕ್ಕೆ ಜಾತಿ ಪ್ರಮಾಣ ಪತ್ರ ನೀಡುವಲ್ಲೂ ಸರ್ಕಾರ ಹಿಂದೇಟು ಹಾಕುತ್ತಿದೆ. ಈ ಧೋರಣೆ ಬದಲಾಗದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಕಾರ್ಯಕ್ರಮ ರೂಪಿಸಲಾಗುವುದು ಎಂದರು.


Spread the love

About Laxminews 24x7

Check Also

ಕಬ್ಬಿನ ಬಿಲ್ ಬಾಕಿಗಾಗಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಎದುರು ರೈತ ಪ್ರತಿಭಟನೆ

Spread the loveಬೆಳಗಾವಿ: ಪ್ರಸಕ್ತ ಸಾಲಿನ ಕಬ್ಬಿನ ಬಿಲ್ ಬಾಕಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಶುಕ್ರವಾರ ಮಹಾನಗರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ