Breaking News
Home / Uncategorized / ಪತಂಜಲಿ ಕೊರೊನಿಲ್​ಗೆ ವಿಶ್ವ ಆರೋಗ್ಯ ಸಂಸ್ಥೆ ಮಾನ್ಯತೆ ಸಿಕ್ಕಿದೆ ಎಂಬುದು ಸುಳ್ಳು

ಪತಂಜಲಿ ಕೊರೊನಿಲ್​ಗೆ ವಿಶ್ವ ಆರೋಗ್ಯ ಸಂಸ್ಥೆ ಮಾನ್ಯತೆ ಸಿಕ್ಕಿದೆ ಎಂಬುದು ಸುಳ್ಳು

Spread the love

ಪತಂಜಲಿ ಸಂಸ್ಥೆಯು ಕೊರೊನಾ ವೈರಸ್​ ಸೋಂಕು ನಿಗ್ರಹಕ್ಕೆಂದು ಹೊರತಂದಿರುವ ಕೊರೊನಿಲ್​ಗೆ ವಿಶ್ವ ಆರೋಗ್ಯ ಸಂಸ್ಥೆ ಮಾನ್ಯತೆ ನೀಡಿದೆ ಎಂಬ ಪೋಸ್ಟ್​ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಆಯುರ್ವೇದ ಕ್ಷೇತ್ರದಲ್ಲಿ ಇದೇ ಮೊದಲ ಬಾರಿ ವಿಶ್ವ ಆರೋಗ್ಯ ಸಂಸ್ಥೆ ಕೊರೊನಿಲ್​ಗೆ ಮಾನ್ಯತೆ ನೀಡಿದೆ ಎಂದು ವೈರಲ್ ಪೋಸ್ಟ್ ನಲ್ಲಿ ಹೇಳಲಾಗಿದೆ.

ಕೋವಿಡ್-19 ತಡೆಯಲು ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕೊರೊನಿಲ್ ಸಹಕಾರಿ ಎಂದು ಪತಂಜಲಿ ಸಂಸ್ಥೆ ಹೇಳಿತ್ತು. ಇದಕ್ಕೆ ಆಯುಷ್ ಸಚಿವಾಲಯದಿಂದ ಮಾನ್ಯತೆ (Certificate of Pharmaceutical Product ) ಸಿಕ್ಕಿದೆ. ಫೆಬ್ರವರಿ 19ರಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಹರ್ಷವರ್ಧನ್ ಅವರ ಉಪಸ್ಥಿತಿಯಲ್ಲಿ ಸರ್ಕಾರ ಈ ಅಂಗೀಕಾರ ನೀಡಿತ್ತು. ಈ ಅಂಗೀಕಾರ ಲಭಿಸಿರುವುದರಿಂದ ಕೊರೊನಿಲ್​ನ್ನು 158 ರಾಷ್ಟ್ರಗಳಿಗೆ ರಫ್ತು ಮಾಡಬಹುದು ಎಂದು ವರದಿಗಳು ಉಲ್ಲೇಖಿಸಿವೆ. ಆದಾಗ್ಯೂ ವಿಶ್ವ ಆರೋಗ್ಯ ಸಂಸ್ಧೆಯು ಈ ರೀತಿಯ ಪ್ರಮಾಣೀಕರಣಕ್ಕೆ ಮಾನದಂಡಗಳನ್ನು ಪ್ರಕಟಿಸಿದ್ದು, ಕೊರೊನಿಲ್​ಗೆ ಇಂಥ ಯಾವುದೇ ರೀತಿಯ ಪ್ರಮಾಣೀಕರಣ ಅಥವಾ ಅನುಮೋದನೆ ನೀಡಿಲ್ಲ.

ವೈರಲ್ ಪೋಸ್ಟ್
ಕೊರೊನಿಲ್ ಅನ್ನು ಕೊರೋನಾಗೆ ಪ್ರಥಮ ಸಾಕ್ಷ್ಯಾಧಾರ ಆಧಾರಿತ ಔಷಧಿ ಎಂದು ವಿಶ್ವ ಆರೋಗ್ಯಸಂಸ್ಥೆ ಮಾನ್ಯತೆ ನೀಡಿರುವುದರಿಂದ ಪತಂಜಲಿ ಆಯುರ್ವೇದ ಕ್ಷೇತ್ರದಲ್ಲಿ ಇತಿಹಾಸ ನಿರ್ಮಿಸಿದೆ ಎಂಬ ಪೋಸ್ಟ್ ಟ್ವಿಟರ್​ನಲ್ಲಿ ಹರಿದಾಡಿದೆ.

ಫ್ಯಾಕ್ಟ್ ಚೆಕ್
ವಿಶ್ವಸಂಸ್ಥೆಯ ಜಿಎಂಪಿ ಗುಣಮಟ್ಟದ ಅನುಮೋದನೆಗಳಿಗೆ ಅನುಗುಣವಾಗಿ ಕೊರೊನಿಲ್‌ಗೆ ಡಿಸಿಜಿಐನಿಂದ CoPP ಪರವಾನಗಿ ನೀಡಲಾಗಿದೆ ಎಂದು ಹೇಳಲು ನಾವು ಸಂತೋಷಪಡುತ್ತೇವೆ ಮತ್ತು ಹೆಮ್ಮೆಪಡುತ್ತೇವೆ ಎಂದು ಪತಂಜಲಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಟ್ವೀಟ್ ಮಾಡಿದ್ದರು.

ಈ ಟ್ವೀಟ್ ಬೆನ್ನಲ್ಲೇ ಕೊರೊನಿಲ್ ಗೆ ವಿಶ್ವ ಆರೋಗ್ಯ ಸಂಸ್ಥೆ ಮಾನ್ಯತೆ ನೀಡಿದೆ ಎಂಬ ಪೋಸ್ಟ್ ವೈರಲ್ ಆಗಿದೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಬಾಲಕೃಷ್ಣ ಅವರು ಕೊರೊನಿಲ್​ಗೆ ವಿಶ್ವ ಆರೋಗ್ಯ ಸಂಸ್ಥೆ ಜಿಎಂಪಿಯ ಸಿಒಪಿಪಿ ಪ್ರಮಾಣಪತ್ರವನ್ನು ಭಾರತ ಸರ್ಕಾರದ ಡಿಸಿಜಿಐ ನೀಡಿದೆ ಎಂಬ ಗೊಂದಲದ ಬಗ್ಗೆ ನಾವು ಸ್ಪಷ್ಟೀಕರಣ ನೀಡಲು ಬಯಸುತ್ತೇವೆ. ವಿಶ್ವ ಆರೋಗ್ಯ ಸಂಸ್ಥೆ ಯಾವುದೇ ಔಷಧಿಗಳನ್ನು ಅನುಮೋದಿಸುವುದಿಲ್ಲ ಅಥವಾ ನಿರಾಕರಿಸುವುದಿಲ್ಲ. ಪ್ರಪಂಚದಾದ್ಯಂತದ ಜನರಿಗೆ ಉತ್ತಮ, ಆರೋಗ್ಯಕರ ಭವಿಷ್ಯವನ್ನು ನಿರ್ಮಿಸಲು ವಿಶ್ವ ಆರೋಗ್ಯ ಸಂಸ್ಥೆ ಕಾರ್ಯನಿರ್ವಹಿಸುತ್ತದೆ ಎಂದಿದ್ದಾರೆ.

ಅದೇ ವೇಳೆ ವಿಶ್ವ ಆರೋಗ್ಯ ಸಂಸ್ಥೆಯ ಯಾವುದೇ ಸಾಂಪ್ರದಾಯಿಕ ಔಷಧಿಗಳಿಗೆ ಪ್ರಮಾಣ ಪತ್ರ ನೀಡಿಲ್ಲ ಎಂದಿದೆ.

ಏನಿದು ವಿಶ್ವಸಂಸ್ಥೆಯ GMP?
ವಿಶ್ವಸಂಸ್ಥೆಯ ಉತ್ತಮ ಉತ್ಪಾದನಾ ಅಭ್ಯಾಸ (GMP) ಗುಣಮಟ್ಟದ ನಿಯಂತ್ರಣ ಮಾನದಂಡಗಳನ್ನು ಒದಗಿಸುತ್ತದೆ, ಇದು ಔಷಧಗಳ ಪರಿಶೀಲನೆ, ಪರೀಕ್ಷೆ, ದೃಢೀಕರಣ, ಅವಲೋಕನ ಮತ್ತು ದಾಖಲಾತಿಗಳ ಪ್ರಕ್ರಿಯೆಗಳನ್ನು ವಿವರಿಸುತ್ತಿದ್ದು, ಔಷಧಿ ಬಳಸಲು ಸೂಕ್ತವೆಂದು ಖಚಿತಪಡಿಸುತ್ತದೆ. ಇಲ್ಲಿರುವ ಕಾನೂನು ಘಟಕಗಳು ವಿತರಣೆ, ಉತ್ಪಾದನೆ ಮತ್ತು ಪರೀಕ್ಷೆ, ಉತ್ಪನ್ನದ ದೋಷಗಳು ಮತ್ತು ದೂರುಗಳಿಗೆ ಉತ್ತರಿಸುತ್ತದೆ. ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ಈ ಮಾನದಂಡಗಳನ್ನು 100 ಕ್ಕೂ ಹೆಚ್ಚು ದೇಶಗಳಲ್ಲಿ ವೈದ್ಯಕೀಯ ಕಾನೂನುಗಳಲ್ಲಿ ಸೇರಿಸಿಕೊಳ್ಳಲಾಗಿದೆ ಮತ್ತು ದೇಶಗಳು ತಮ್ಮದೇ ಆದ ಜಿಎಂಪಿ ಮಾನದಂಡಗಳನ್ನು ನಿರ್ಧರಿಸಲು ಈ ಮಾನದಂಡಗಳನ್ನು ಸಹ ಬಳಸಲಾಗಿದೆ. ಭಾರತದಲ್ಲಿ ಉತ್ತಮ ಉತ್ಪಾದನಾ ಅಭ್ಯಾಸಕ್ಕೆ ಇನ್​ಸ್ಟಿಟ್ಯೂಟ್ ಅಫ್ ಗುಡ್ ಮ್ಯಾನ್ಯುಫ್ಯಾಕ್ಚರಿಂಗ್ ಪ್ರಾಕ್ಟೀಸಸ್ ನೇತೃತ್ವ ವಹಿಸುತ್ತದೆ.

credits to:The post Fact Check: ಪತಂಜಲಿ ಕೊರೊನಿಲ್​ಗೆ ವಿಶ್ವ ಆರೋಗ್ಯ ಸಂಸ್ಥೆ ಮಾನ್ಯತೆ ಸಿಕ್ಕಿದೆ ಎಂಬುದು ಸುಳ್ಳು appeared first on TV9 Kannada.


Spread the love

About Laxminews 24x7

Check Also

ಚುನಾವಣೆ ಚೆಕಿಂಗ್; ದಾಖಲೆ ಇಲ್ಲದ 20 ಲಕ್ಷಕ್ಕೂ ಅಧಿಕ ವಶ.!

Spread the love ಚಿತ್ರದುರ್ಗ; ಚಿತ್ರದುರ್ಗದಲ್ಲಿ ವಾಹನ ಒಂದರಲ್ಲಿ ವ್ಯಕ್ತಿಯೊಬ್ಬರು ದಾಖಲೆ ಇಲ್ಲದೆ ಸುಮಾರು 20 ಲಕ್ಷಕ್ಕೂ ಅಧಿಕ ಹಣವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ