Breaking News

ಮಠಾಧಿಪತಿಗಳೇ ಪಾದಯಾತ್ರೆ ಮಾಡಿ ಎಂದು ಹೇಳಿ ಜಾತಿಯ ವಿಷ ಬೀಜ ಬಿತ್ತಿದ್ದಾರೆ : ವಾಟಾಳ್ ನಾಗರಾಜ್

Spread the love

ಮೈಸೂರು : ರಾಜ್ಯದಲ್ಲಿ ಮೀಸಲಾತಿ ಹೋರಾಟದ ನೇತೃತ್ವ ವಹಿಸಿಕೊಂಡಿರುವ ಮಠಾಧೀಶರ ವಿರುದ್ಧ ವಾಟಾಳ್ ನಾಗರಾಜ್ ಗರಂ ಆಗಿದ್ದು, ಇಂದು ಮೈಸೂರಿನ ಹಾಡಿರ್ಂಗ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಠಾಧಿಪತಿಗಳು ಮೀಸಲಾತಿಗಾಗಿ ಹೋರಾಟ ಮಾಡಿ ರಾಜ್ಯವನ್ನು ಜಾತಿಗೆ ಸೀಮಿತಗೊಳಿಸಬಾರದು.

ಮಠಾಧಿಪತಿಗಳು ಬಸವಣ್ಣನವರ ತತ್ವ ಸಿದ್ಧಾಂತಗಳನ್ನು ಪಾಲಿಸಿ ಮಠದಲ್ಲಿಯೇ ಇರಿ. ಮೀಸಲಾತಿ ಹಾಗೂ ಜಾತಿಗಾಗಿ ಹೋರಾಟಕ್ಕೆ ಬಂದರೆ ನಿಮ್ಮ ಶಕ್ತಿ ಕುಂದುತ್ತದೆ ಎಂದು ಮನವಿ ಮಾಡಿಕೊಂಡರು.

ಇದೇ ವೇಳೆ ಬಿ.ಎಸ್.ಯಡಿಯೂರಪ್ಪ ವಿರುದ್ಧ ಗಂಭೀರ ಆರೋಪ ಮಾಡಿದ ವಾಟಾಳ್ ನಾಗರಾಜ್, ಮಠಾಧಿಪತಿಗಳ ಮೀಸಲಾತಿ ಹೋರಾಟಕ್ಕೆ ಬಿ.ಎಸ್.ಯಡಿಯೂರಪ್ಪನವರೇ ಕಾರಣ.

ಅವರೇ ಕೆಲವರಿಗೆ ಪಾದಯಾತ್ರೆ ಮಾಡಿ ಎಂದು ಹೇಳಿ ಜಾತಿಯ ವಿಷ ಬೀಜ ಬಿತ್ತಿದ್ದಾರೆ ಎಂದು ಆರೋಪಿಸಿದರು.

ಅಲ್ಲದೆ ರಾಜ್ಯದಲ್ಲಿ ಯಡಿಯೂರಪ್ಪ ಒಂದು ನಿಮಿಷವೂ ಅಧಿಕಾರದಲ್ಲಿರಲು ಯೋಗ್ಯರಲ್ಲ. ಅವರು ಪ್ರಮಾಣಿಕವಾಗಿದ್ದರೆ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಮಠಾಧಿಪತಿಗಳು ಮುಂದೊಂದು ದಿನ


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ