ಯಾದಗಿರಿ: ಜಮೀನು ಪಾಲು ವಿಚಾರಕ್ಕೆ ತಹಶೀಲ್ದಾರ್ 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ ದೊಡ್ಡ ಬನ್ನಪ್ಪ ಎಂಬುವವರಿ0ದ 5 ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಜಿಲ್ಲೆಯ ಗುರುಮಠಕಲ್ ತಹಸೀಲ್ದಾರ್ ಕಛೇರಿ ಮೇಲೆ ಎಸಿಬಿ ದಾಳಿ ನಡೆಸಿದ್ದರು.
ಲಂಚ ಸ್ವೀಕರಿಸುತಿದ್ದ ತಹಸೀಲ್ದಾರ ಸಂಗಮೇಶ ಜಿಡಗಾರನನ್ನು ವಶಕ್ಕೆ ಪಡೆಯಲಾಗಿದೆ. ಎಸಿಬಿ ಎಸ್ ಪಿ ಮಹೇಶ್ ಮೇಘಣ್ಣವರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಡಿವೈಎಸ್ ಪಿ ಉಮಾಶಂಕರ್, ಪಿಎಸ್ ಐ ಗುರುಪಾದ್ ಬಿರಾದಾರ, ಸಿಬ್ಬಂದಿ ಅಮರ್, ವಿಜಯ್, ಗುತ್ತಪ್ಪ ದಾಳಿಯಲ್ಲಿ ಪಾಲ್ಗೊಂಡಿದ್ದರು.
Laxmi News 24×7