Breaking News

ಮೀಟರ್ ದರ ಏರಿಸುವಂತೆ ಆಟೋ ಚಾಲಕರ ಪ್ರತಿಭಟನೆ

Spread the love

ಬೆಂಗಳೂರು, ಫೆ.23- ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿದಂತೆ ಎಲ್ಲಾ ಬೆಲೆಗಳು ಹೆಚ್ಚುತ್ತಿವೆ. ಅದಕ್ಕೆ ಅನುಗುಣವಾಗಿ ಆಟೋ ಮೀಟರ್ ದರವನ್ನು ಏರಿಕೆ ಮಾಡುವಂತೆ ಒತ್ತಾಯಿಸಿ ಆಟೋ ಚಾಲಕರು ಇಂದು ನಗರದಲ್ಲಿ ಪ್ರತಿಭಟನೆ ನಡೆಸಿದರು. ಸಿಐಟಿಯು ನೇತೃತ್ವದ ಆಟೋರಿಕ್ಷಾ ಯೂನಿಯನ್ ಇಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದೆ. ಎಂಟು ವರ್ಷಗಳ ಹಿಂದೆ 2013ರಲ್ಲಿ ಆಟೋ ಮೀಟರ್ ದರ ಪರಿಷ್ಕರಣೆಯಾಗಿದೆ. ಅಲ್ಲಿಂದ ಈವರೆಗೂ ದರ ಇದ್ದಷ್ಟೇ ಇದೆ. ಗ್ಯಾಸ್, ಪೆಟ್ರೋಲ್, ಅಡುಗೆ ಎಣ್ಣೆ, ಆಹಾರ ಪದಾರ್ಥಗಳು, ವಿಮಾ ಶುಲ್ಕಗಳು, ನೀರು, ವಿದ್ಯುತ್ ದರಗಳು, ಆಟೋ ಬಿಡಿ ಭಾಗಗಳು, ಆರ್.ಟಿ.ಒ.ಶುಲ್ಕಗಳು ಸೇರಿದಂತೆ ಎಲ್ಲವೂ ದುಬಾರಿಯಾಗಿವೆ.ಆಟೋ ಓಡಿಸಿ ಬದುಕು ನಡೆಸುವವರು ಜೀವಿಸುವುದು ಕಷ್ಟವಾಗಿದೆ. ಈಗಾಗಲೇ ಮಂಗಳೂರು ಹಾಗೂ ಇತರ ಕಡೆಗಳಲ್ಲಿ ದರ ಪರಿಷ್ಕರಣೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಜೀವನ ನಿರ್ವಹಣೆ ದುಬಾರಿಯಾಗಿರುವುದರಿಂದ ಇಲ್ಲಿಯೂ ದರ ಪರಿಷ್ಕರಣೆ ಮಾಡಬೇಕು ಎಂದು ಚಾಲಕರ ಸಂಘದ ಉಪಾಧ್ಯಕ್ಷ ಆರ್.ನವೀನ್ ಶೆಣೈ ಒತ್ತಾಯಿಸಿದ್ದಾರೆ.

15 ವರ್ಷ ಮೇಲ್ಪಟ್ಟ ಆಟೋಗಳಿಗೆ ಎಫ್‍ಸಿ ಮಾಡುವುದನ್ನು ನಿಲ್ಲಿಸಲಾಗಿದೆ. ಸಂಕಷ್ಟ ಕಾಲದಲ್ಲಿ ಹೊಸ ಆಟೋ ಖರೀದಿಗೆ ಆರ್ಥಿಕ ಸಮಸ್ಯೆ ಇದೆ. ಈಗಾಗಲೇ ಸಾಲ ಕೊಟ್ಟವರು ದುಬಾರಿ ಬಡ್ಡಿ ವಸೂಲಿ ಮಾಡುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದರು


Spread the love

About Laxminews 24x7

Check Also

ಅಪಘಾತದ ಕಥೆ ಕಟ್ಟಿ ಹಣ ಸುಲಿಗೆ; ವಯೋವೃದ್ಧ ಕಾರು ಚಾಲಕರೇ ಈತನ ಟಾರ್ಗೆಟ್!

Spread the loveಅಪಘಾತದ ಕಥೆ ಕಟ್ಟಿ ಹಣ ಸುಲಿಗೆ; ವಯೋವೃದ್ಧ ಕಾರು ಚಾಲಕರೇ ಈತನ ಟಾರ್ಗೆಟ್! ಬೆಂಗಳೂರು: ವಯೋವೃದ್ಧ ಕಾರು ಚಾಲಕರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ