Breaking News
Home / ರಾಜಕೀಯ / ಯತ್ನಾಳ್ ಹಿಂದುತ್ವವಾದಿ ಎಂಬುದಕ್ಕೆ ಖುಷಿ ಇದೆ, ಆದರೂ ಪಕ್ಷದ ಶಿಸ್ತಿನ ಒಳಗೆ ಇದ್ದರೆ ಒಳ್ಳೆಯದು; ಈಶ್ವರಪ್ಪ

ಯತ್ನಾಳ್ ಹಿಂದುತ್ವವಾದಿ ಎಂಬುದಕ್ಕೆ ಖುಷಿ ಇದೆ, ಆದರೂ ಪಕ್ಷದ ಶಿಸ್ತಿನ ಒಳಗೆ ಇದ್ದರೆ ಒಳ್ಳೆಯದು; ಈಶ್ವರಪ್ಪ

Spread the love

ಶಿವಮೊಗ್ಗ (ಫೆಬ್ರವರಿ 23); ಇತ್ತೀಚಿನ ದಿನಗಳಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಸಿಎಂ ಯಡಿಯೂರಪ್ಪ  ವಿರುದ್ದ ಒಂದರ ಹಿಂದೊಂದರಂತೆ ಹೇಳಿಕೆ ನೀಡುತ್ತಲೇ ಇದ್ದಾರೆ. ಇದರಿಂದ ಪಕ್ಷದ ಒಳಗೆ ಮುಜುಗರದ ಪರಿಸ್ಥಿತಿ ಉಂಟಾಗಿದೆ. ಈ ಕುರಿತು ಬಿಜೆಪಿ ಹಿರಿಯ ನಾಯಕರು ಗಂಭೀರವಾಗಿ ಪರಿಗಣಿಸಿದ್ದಾರೆ. ಅಲ್ಲದೆ, ಶಾಸಕ ಯತ್ನಾಳ್​ಗೆ ನೊಟೀಸ್​ ಸಹ ಜಾರಿ ಮಾಡಿದ್ದಾರೆ. ಈ ಕುರಿತು ಇಂದು ಶಿವಮೊಗ್ಗ ದಲ್ಲಿ ಮಾತನಾಡಿರುವ ಸಚಿವ ಕೆ.ಎಸ್​. ಈಶ್ವರಪ್ಪ, “ಯತ್ನಾಳ್ ಅವರು ಸಿಎಂ ಬಗ್ಗೆ ಈ ರೀತಿಯ ಹೇಳಿಕೆ ನೀಡುವುದಕ್ಕೆ ನಾನು ಒಪ್ಪಲ್ಲ‌. ಅವರು ಒಂದು ಪ್ರಕಾರದ ಹಿಂದೂತ್ವವಾದಿ, ಅದಕ್ಕೆ‌ ನಾನು ಖುಷಿ ಪಡುತ್ತೇನೆ. ಆದರೆ, ಅವರು  ಪಕ್ಷದ ಶಿಸ್ತಿನ ಒಳಗೆ ಇದ್ದರೆ ಒಳ್ಳೆಯದು” ಎಂದು ಸಲಹೆ ನೀಡಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್​ ಮತ್ತು ಬಿ.ಎಸ್.​ ಯಡಿಯೂರಪ್ಪ ಬಿಕ್ಕಟ್ಟಿನ ಕುರಿತು ಮಾತನಾಡಿರುವ ಸಚಿವ ಈಶ್ವರಪ್ಪ, “ಯತ್ನಾಳ್ ಬಗ್ಗೆ ಏನು ಕ್ರಮ ತೆಗೆದು ಕೊಳ್ಳಬೇಕು? ಎಂಬ ಬಗ್ಗೆ ಕೇಂದ್ರಕ್ಕೆ ಮಾಹಿತಿ ಕಳುಹಿಸಿ ಕೊಡಲಾಗಿದೆ. ಕೇಂದ್ರದ ನಾಯಕರು ಅವರಿಗೆ ನೋಟಿಸ್ ನೀಡಿದ್ದಾರೆ. ಅದಕ್ಕೆ ಯತ್ನಾಳ್ ಉತ್ತರ ಸಹ ನೀಡಿದ್ದಾರೆ. ಕೇಂದ್ರದ ನಾಯಕರು ಈ ಬಗ್ಗೆ ಕ್ರಮ ಕೈಗೊಳ್ಳಲಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

ಪಂಚಮಸಾಲಿ ಸೇರಿದಂತೆ ಅನೇಕ ಸಮುದಾಯಗಳ ಮೀಸಲಾತಿ ಹೋರಾಟದ ಕುರಿತು ಮಾತನಾಡಿರುವ ಈಶ್ವರಪ್ಪ, “ರಾಜ್ಯದಲ್ಲಿ  ಹಲವು ಸಮಾಜದವರು ಅವರ ಸಮಾಜಕ್ಕೆ ಮೀಸಲಾತಿ ಬೇಕು ಎಂದು ಕೇಳುತ್ತಿದ್ದಾರೆ. ಆದರೆ ಅರ್ಹತೆ ತಕ್ಕಂತೆ ಮೀಸಲಾತಿ ಸಿಗಬೇಕು ಎಂಬುದು ನನ್ನ ಆಶಯವಾಗಿದೆ. ಆದರೆ, ಒತ್ತಾಯ ಮಾಡಿದವರಿಗೆ ಮೀಸಲಾತಿ ನೀಡುವುದಕ್ಕೆ ನಾನು ವಿರೋಧಿಸುತ್ತೇನೆ. ರಾಜ್ಯದಲ್ಲಿ ಅನೇಕ ಸಮಾಜದವರು ತಮಗೆ ಮೀಸಲಾತಿ ಬೇಕು ಎಂದು ಕೇಳುತ್ತಿದ್ದಾರೆ.

Spread the love

About Laxminews 24x7

Check Also

ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹೆತ್ತ ಕಂದಮ್ಮಗಳನ್ನೇ ವಿಷಪ್ರಾಶನ ಮಾಡಿಸಿ ಕೊಂದ ತಾಯಿ

Spread the love ಮಂಡ್ಯ: ಐಸ್ ಕ್ರೀಂ ಸೇವಿಸಿದ್ದ ಅವಳಿ ಮಕ್ಕಳಿಬ್ಬರೂ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಹೆತ್ತ ತಾಯಿಯೇ ವಿಷವುಣಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ