Breaking News

GST ವ್ಯಾಪ್ತಿಗೆ ಪೆಟ್ರೋಲ್‌, ಡಿಸೇಲ್‌ : ಕೇಂದ್ರ ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ಒತ್ತಾಯ

Spread the love

ನವದೆಹಲಿ : ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಿಂದ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಕರೋನಾ ವೈರಸ್ ಪೂರೈಕೆ ಕಡಿತಕ್ಕೆ ಕಾರಣವಾಗಿ ತೈಲ ಉತ್ಪಾದನೆಮೇಲೂ ಪರಿಣಾಮ ಬೀರಿತು. ಪೆಟ್ರೋಲಿಯಂ ಉತ್ಪನ್ನಗಳನ್ನು ಅದರ ಪರಿಮಿತಿಯೊಳಗೆ ಸೇರಿಸಿ ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಜಿಎಸ್ ಟಿ ಕೌನ್ಸಿಲ್ ಗೆ ನಾವು ನಿರಂತರವಾಗಿ ಮನವಿ ಮಾಡುತ್ತಿದ್ದೇವೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರಕ್ಕೆ ಸಂಬಂಧಪಟ್ಟಂತೆ ಮಾತನಾಡಿರುವ ಅವರು, ರಾಜಸ್ಥಾನ ಮತ್ತು ಮಹಾರಾಷ್ಟ್ರ ಗಳು ಅತಿ ಹೆಚ್ಚು ತೆರಿಗೆ ಯನ್ನು ಹೊಂದಿವೆ ಎಂಬುದನ್ನು ಸೋನಿಯಾ ಜಿ ತಿಳಿದುಕೊಳ್ಳಬೇಕು ಎಂದು ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರಕಾರಗಳ ಆದಾಯ ವು ಲಾಕ್‌ ಡೌನ್ ಸಮ ಸಮಯದಲ್ಲಿ ಬಹಳ ಕಡಿಮೆ ಇತ್ತು ಅಂತ ಅವರು ಇದೇ ವೇಳೆ ಹೇಳಿದ್ದಾರೆ.

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಮುಖಿಯಾಗಿದೆ. ಹಲವು ನಗರಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 100 ರೂ ದಾಟಿದೆ. ಇಂಧನ ಬೆಲೆ ಏರಿಕೆ ಬಗ್ಗೆ ಪ್ರತಿಪಕ್ಷಗಳು ಮೋದಿ ಸರ್ಕಾರದ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಲೇ ಇದೆ. ಭಾನುವಾರ ಮಾತನಾಡಿದ ಧರ್ಮೇಂದ್ರ ಪ್ರಧಾನ್, ಇಂಧನ ದರ ಏರಿಕೆಗೆ ಎರಡು ಪ್ರಮುಖ ಕಾರಣಗಳಿವೆ ಅಂತ ಹೇಳಿದ್ದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ