Breaking News

ಪೊಗರು’ ವಿವಾದಕ್ಕೆ ತೆರೆ: ವಿವಾದಿತ ದೃಶ್ಯಕ್ಕೆ ಕತ್ತರಿ ಹಾಕುತ್ತೇವೆ ಎಂದ ನಿರ್ದೇಶಕ ನಂದ ಕಿಶೋರ್

Spread the love

ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪೊಗರು ಚಿತ್ರದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಇದೇ ವಿಚಾರವಾಗಿ ಹೋರಾಟ ನಡೆಸುವುದಾಗಿಯೂ ಬ್ರಾಹ್ಮಣ ಸಮುದಾಯದ ಸಂಘದ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಎಚ್ಚರಿಕೆ ನಿಡಿದ್ದರು. ಇದರ ಬೆನ್ನಲ್ಲೇ ಇದೀಗ ವಿವಾದಕ್ಕೆ ತೆರೆಯೆಳೆಯುವ ಯತ್ನ ನಡೆದಿದೆ.

ಪೊಗರು ಚಿತ್ರ ವಿವಾದ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿದ ನಿರ್ದೇಶಕ ನಂದ ಕಿಶೋರ್, ಯಾವುದೇ ಸಮುದಾಯಕ್ಕೆ ನೋವುಂಟು ಮಾಡಲು ಸೀನ್ ಮಾಡಿಲ್ಲ. ಬ್ರಾಹ್ಮಣರಿಗೆ ಅವಮಾನ ಮಾಡಬೇಕು ಎಂಬ ಉದ್ದೇಶವೂ ಇಲ್ಲ. ಚಿತ್ರದ ಕೆಲ ದೃಶ್ಯಗಳಿಂದ ಬ್ರಾಹ್ಮಣ ಸಮುದಾಯಕ್ಕೆ ನೋವಾಗಿದ್ದರೆ ಕ್ಷಮೆಯಿರಲಿ. ಇನ್ನು ಮುಂದೆ ಇಂತಹ ತಪ್ಪುಗಳಾಗದಂತೆ ಎಚ್ಚರ ವಹಿಸುತ್ತೇವೆ. ಸಮುದಾಯದ ಬಗ್ಗೆ ನನಗೆ ಗೌರವವಿದೆ ಎಂದಿದ್ದಾರೆ.

ಅಲ್ಲದೇ ಆದಷ್ಟು ಶೀಘ್ರದಲ್ಲಿ ವಿವಾದಿತ ದೃಶ್ಯಗಳನ್ನು ತೆಗೆಯುತ್ತೇವೆ. ತಾಂತ್ರಿಕವಾಗಿ ಏನೆಲ್ಲ ಬದಲಾವಣೆಗಳು ಆಗಬೇಕೋ ಅದೆಲ್ಲವನ್ನೂ ಮಾಡುತ್ತೇವೆ. ಆದರೆ ನಮಗೆ ಸ್ವಲ್ಪ ಕಾಲಾವಕಾಶ ನೀಡಬೇಕು. ವಿವಾದಿತ ದೃಶ್ಯಕ್ಕೆ ಕತ್ತರಿ ಹಾಕುತ್ತೇವೆ ಎಂದು ತಿಳಿಸಿದರು.


Spread the love

About Laxminews 24x7

Check Also

ರಾಜ್ಯದ ಸರ್ಕಾರಿ ನೌಕರರಿಗೆ `ಹಳೆಯ ಪಿಂಚಣಿ ಮರು ಜಾರಿ’ಗೆ ಕ್ರಮ: CM ಸಿದ್ದರಾಮಯ್ಯ ಭರವಸೆ

Spread the loveಬೆಂಗಳೂರು: ರಾಜ್ಯದ ಸರ್ಕಾರಿ ನೌಕರರ ದೀರ್ಘಕಾಲದ ಬೇಡಿಕೆಯಾದ ಹಳೆಯ ಪಿಂಚಣಿ ಯೋಜನೆ (OPS) ಮರು ಜಾರಿಗೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ