Breaking News

ಕೇರಳದಲ್ಲಿ ‘ಕುಸ್ತಿ’ ದೆಹಲಿಯಲ್ಲಿ ‘ದೋಸ್ತಿ’: ಪ್ರಲ್ಹಾದ ಜೋಶಿ ವಾಗ್ದಾಳಿ

Spread the love

ತಿರುವನಂತಪುರ: ಕಾಂಗ್ರೆಸ್ ಹಾಗೂ ಎಡ ಪಕ್ಷಗಳ ಕಪಟತೆ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಹಾಗೂ ಬಿಜೆಪಿಯ ಹಿರಿಯ ನಾಯಕ ಪ್ರಲ್ಹಾದ ಜೋಶಿ, ಎರಡೂ ಪಕ್ಷಗಳು ಪಶ್ಚಿಮ ಬಂಗಾಳ ಹಾಗೂ ತಮಿಳುನಾಡಿನಲ್ಲಿ ಸ್ನೇಹಿತರಾಗಿದ್ದು, ಆದರೆ ಕೇರಳದಲ್ಲಿ ಪರಸ್ಪರ ಸ್ಪರ್ಧಿಸುತ್ತಿದೆ ಎಂದು ಲೇವಡಿ ಮಾಡಿದರು.

ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ ಮತ್ತು ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಕೇರಳದಲ್ಲಿ ಸ್ಪರ್ಧಿಸುತ್ತಿದೆ. ಕೇರಳದಲ್ಲಿ ‘ಕುಸ್ತಿ’, ದೆಹಲಿಯಲ್ಲಿ ‘ದೋಸ್ತಿ’. ಈ ಪಕ್ಷಗಳ ಬೂಟಾಟಿಕೆಯನ್ನು ನೋಡಿ. ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಕೂಡಾ ದೆಹಲಿಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ್ದಾರೆ. ಅನೇಕ ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಪ್ರಾದೇಶಿಕ ಪಕ್ಷಗಳ ಬೆಂಬಲ ಅತ್ಯಗತ್ಯವಾಗಿದೆ ಎಂದು ಆರೋಪ ಮಾಡಿದರು.

ಎಡಪಂಥೀಯರ ಕಪಟತೆಯೆಂದರೆ ಪಶ್ಚಿಮ ಬಂಗಾಳ ಹಾಗೂ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾರೆ. ಅವರು (ಕಾಂಗ್ರೆಸ್ ಹಾಗೂ ಎಡರಂಗ) ಪಶ್ಚಿಮ ಬಂಗಾಳ ಹಾಗೂ ತಮಿಳುನಾಡಿನಲ್ಲಿ ಸ್ನೇಹಿತರಾಗಿದ್ದಾರೆ. ರಾಹುಲ್ ಗಾಂಧಿ ಅವರಿಗೆ ಇದನ್ನೇ ಕೇಳ ಬಯಸುತ್ತೇನೆ. ನೀವು ಪ್ರಜಾಪ್ರಭುತ್ವ ಅಥವಾ ಕಪಟತೆಯ ಮೇಲೆ ನಂಬಿಕೆ ಇರಿಸುವೀರಾ ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ