Breaking News

ಸರ್ಕಾರಿ ನೌಕರರ ವಿರುದ್ಧ ದೂರು ನೀಡುವವರು ತಮ್ಮ ಮಾಹಿತಿ ನೀಡಲೇಬೇಕು

Spread the love

ಬೆಂಗಳೂರು,ಫೆ.24- ಸರ್ಕಾರಿ ನೌಕರರ ವಿರುದ್ಧ ಅನಾಮಧೇಯ ದೂರುಗಳು ಕೇಳಿಬಂದಲ್ಲಿ, ದೂರು ನೀಡಿದವರ ಹೆಸರು ಮತ್ತು ಪೂರ್ಣ ವಿಳಾಸವನ್ನೊಳಗೊಂಡ ದಾಖಲೆಗಳಿದ್ದರೆ ಮಾತ್ರ ತನಿಖೆ ನಡೆಸಲು ಅನುವಾಗುವಂತೆ ಸುತ್ತೋಲೆ ಹೊರಡಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ಕೊಟ್ಟಿದ್ದಾರೆ.

ದೂರು ನೀಡುವ ವ್ಯಕ್ತಿಗಳ ಪೂರ್ಣ ಹೆಸರು ಮತ್ತು ವಿಳಾಸವನ್ನು ಖಚಿತಪಡಿಸಿಕೊಂಡು ಪೂರಕ ದಾಖಲೆಗಳನ್ನು ಒದಗಿಸಿದ ನಂತರ ತನಿಖೆಗೆ ಮುಂದಾಗಬೇಕು. ಈ ಬಗ್ಗೆ ಸುತ್ತೋಲೆ ಹೊರಡಿಸುವಂತೆ ಸೂಚಿಸಿದ್ದಾರೆ.
ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‍ಗೆ ಪತ್ರ ಬರೆದಿರುವ ಬಿಎಸ್‍ವೈ, ಇತ್ತೀಚೆಗೆ ಅನಾಮಧೇಯ ವ್ಯಕ್ತಿಗಳು ನಕಲಿ ಹೆಸರು ಹಾಗೂ ವಿಳಾಸವನ್ನು ಬಳಸಿಕೊಂಡು ಸರ್ಕಾರಿ ಅಕಾರಿಗಳು ಮತ್ತು ನೌಕರರ ವಿರುದ್ಧ ಬೇನಾಮಿ ದೂರುಗಳನ್ನು ನೀಡುತ್ತಿದ್ದಾರೆ.

ಈ ದೂರನ್ನು ಆಧರಿಸಿ ಅವರ ವಿರುದ್ಧ ತನಿಖೆ ನಡೆಸುವುದು ಇಲ್ಲವೇ ವಿಚಾರಣೆ ಮಾಡುವುದರಿಂದ ನೌಕರರಿಗೆ ಧಕ್ಕೆ ಉಂಟಾಗುತ್ತದೆಯಲ್ಲದೆ ಆಡಳಿತಾತ್ಮಕ ಸಮಸ್ಯೆಗಳು ಉದ್ಭವವಾಗಿ ಸರ್ಕಾರಿ ಕೆಲಸಕಾರ್ಯಗಳು ಕುಂಠಿತವಾಗುತ್ತವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಸರ್ಕಾರದ ಮಾದರಿಯಲ್ಲಿ 3-10-2019ರಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿ ನೌಕರರ ವಿರುದ್ಧ ಅನಾಮಧೇಯ ದೂರುಗಳ ಆಧಾರದ ಮೇಲೆ ತನಿಖೆ ನಡೆಸಬಾರದೆಂದು ಸುತ್ತೋಲೆ ಹೊರಡಿಸಿತ್ತು. ಆದರೆ ಇತ್ತೀಚೆಗೆ ಹೆಚ್ಚು ದುರುಪಯೋಗವಾಗುತ್ತದೆ ಎಂಬ ದೂರುಗಳು ಬಂದಿವೆ ಎಂದು ಹೇಳಿದ್ದಾರೆ.

ಸರ್ಕಾರಿ ನೌಕರರ ಸಂಘವು ನನ್ನನ್ನು ವೈಯಕ್ತಿಕವಾಗಿ ಭೇಟಿಯಾಗಿ ತಾವು ಎದುರಿಸುತ್ತಿರುವ ಸಮಸ್ಯೆಗಳನ್ನು ಮನವರಿಕೆ ಮಾಡಿದ್ದಾರೆ. ಹೀಗಾಗಿ ವ್ಯವಸ್ಥೆಯಲ್ಲಿನ


Spread the love

About Laxminews 24x7

Check Also

ಅಕ್ಟೋಬರ್ 28ರಿಂದ ಸೋಯಾ, ಸೂರ್ಯಕಾಂತಿ, ಹೆಸರು ಖರೀದಿ ಆರಂಭ: ಸಚಿವ ಶಿವಾನಂದ ಪಾಟೀಲ

Spread the love ಬೆಂಗಳೂರು: ಬೆಂಬಲ ಬೆಲೆಯಲ್ಲಿ ಅಕ್ಟೋಬರ್ 28ರಿಂದ (ಮಂಗಳವಾರ) ಸೋಯಾಬಿನ್‌, ಸೂರ್ಯಕಾಂತಿ ಮತ್ತು ಹೆಸರುಕಾಳು ಖರೀದಿ ಪ್ರಕ್ರಿಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ