Breaking News

ನೂರು ವರ್ಷದ ಬಳಿಕ ನಡೆಯುತ್ತಿರುವ ಹಿಂಡಲಗಾ ​ಗ್ರಾಮದೇವತೆ ಶ್ರೀ ಮಹಾಲಕ್ಷ್ಮಿ ಜಾತ್ರೆ

Spread the love

ಬೆಳಗಾವಿ​ – ನೂರು ವರ್ಷದ ಬಳಿಕ ನಡೆಯುತ್ತಿರುವ ಹಿಂಡಲಗಾ ಗ್ರಾಮದೇವತೆ ಶ್ರೀ ಮಹಾಲಕ್ಷ್ಮಿ ಜಾತ್ರೆಯ ಹಿನ್ನೆಲೆಯಲ್ಲಿ ಶಾಸಕಿ ಲಕ್ಷ್ಮಿ ​ಹೆಬ್ಬಾಳಕರ್ ನೇತೃತ್ವದಲ್ಲಿ ಗ್ರಾಮಸ್ಥರು  ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿದರು.​
 
​ಮಾರ್ಚ್ 16ರಿಂದ 20ರ ವರೆಗೆ ಜಾತ್ರೆ ನಡೆಯಲಿದ್ದು, ಜಾತ್ರೆಯ ಹಿನ್ನೆಲೆಯಲ್ಲಿ ಇಡೀ ಗ್ರಾಮದಲ್ಲಿ ಹ​ರ್ಷದ​ ವಾತಾವರಣ ನಿರ್ಮಾಣವಾಗಿದೆ.​ ಜಾತ್ರಾ ಮಹೋತ್ಸವಕ್ಕೆ ಯಾವುದೇ ಅಡ್ಡಿ ಆತಂಕಗಳು, ಅಹಿತಕರ ಘಟನೆಗಳು ನಡೆಯ​ದ ಹಾಗೆ ಮುಂಜಾಗ್ರತಾ ಕ್ರಮಗಳನ್ನು ​ಕೈಗೊಳ್ಳಬೇಕು ಎಂದು ಗ್ರಾಮದ ಮುಖಂಡರು ಹಾಗೂ ಗ್ರಾಮ ಪಂಚಾಯತ್ ಸದಸ್ಯ​ರು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಜೊತೆ​ ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಿ ಮನವಿಯನ್ನು ಸಲ್ಲಿಸಿ ಜಿಲ್ಲಾಧಿಕಾರಿಗಳ​ ಜೊತೆ ಸುಧೀರ್ಘವಾಗಿ ಚರ್ಚಿಸಿದ​ರು.​
ಕಳೆದ ವರ್ಷ ಜರುಗಬೇಕಾ​ಗಿದ್ದ ಈ ಜಾತ್ರಾ ಮಹೋತ್ಸವವು ಕೊರೊನಾ ಆವರಿಸಿದ್ದ ಕಾರಣ ರದ್ದುಗೊಂಡಿತ್ತು, ಈ ವರ್ಷ ಜಾತ್ರಾ ಮಹೋತ್ಸವ​ದಲ್ಲಿ​ ಪಾಲ್ಗೊಳ್ಳುವ ಭಕ್ತಾಧಿಗಳಿಗೆ ಯಾವುದೇ ತೊಂದರೆಗಳಾಗಬಾರದು ​ಎ​ನ್ನುವ ಉದ್ದೇಶದಿಂದ ಮೂಲಭೂತ ಸೌಕರ್ಯ,​ ಪೊಲೀಸ್​ ಭದ್ರತೆ, ವಿದ್ಯುತ್ ಸೌಲಭ್ಯ, ರಸ್ತೆ ಸಂಪರ್ಕ, ನೀರಿನ ವ್ಯವಸ್ಥೆ, ಆರೋಗ್ಯ, ಅಂಬ್ಯುಲೈನ್ಸ್ ವ್ಯವಸ್ಥೆ​ ಸೇರಿದಂತೆ​ ಒಟ್ಟಾರೆಯಾಗಿ ಜಾತ್ರೆ ಒಂದು ಶಿಸ್ತು, ಸಂಯಮದಿಂದ ಕೂಡಿರಬೇಕೆ​ನ್ನುವ ಹಿನ್ನೆಲೆಯಲ್ಲಿ ಲಕ್ಷ್ಮಿ ಹೆಬ್ಬಾಳಕರ್ ​
​ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದರು. ​

Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ