Breaking News

ರಾತ್ರೋರಾತ್ರಿ ಕಾರ್ಯಾಚರಣೆ, ಬಿಜೆಪಿ ಮುಖಂಡ ನಾಗರಾಜ್ ಸೇರಿ ಇಬ್ಬರು ಅರೆಸ್ಟ್

Spread the love

ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವೇಲಿ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಹಾಗೂ ಕ್ವಾರಿ ಮಾಲೀಕ ನಾಗರಾಜ್ ನನ್ನು ಬಂಧಿಸಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರಕರಣದ ಪ್ರಮುಖ ಆರೋಪಿ ನಾಗರಾಜ್ ನನ್ನು ಬಂಧಿಸಿದ್ದಾರೆ. ನಿನ್ನೆ ನಾಲ್ವರನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿಯಾಗಿರುವ ಭ್ರಮರವಾಸಿನಿ ಕ್ರಷರ್ಸ್ ಮಾಲೀಕ ಜಿ.ಎಸ್. ನಾಗರಾಜ್ ಹಾಗೂ ಸ್ಪೋಟಕ ಸರಬರಾಜು ಮಾಡಿದ ಮತ್ತೋರ್ವ ಆರೋಪಿ ಗಣೇಶ್ ಎಂಬುವನನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ಸ್ಫೋಟ ಪ್ರಕರಣದ ನಂತರ ಆರೋಪಿಗಳು ಪರಾರಿಯಾಗಿದ್ದರು.

ದುರಂತದಲ್ಲಿ 6 ಮಂದಿ ಮೃತಪಟ್ಟಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಗುಡಿಬಂಡೆ ಪಿಎಸ್‌ಐ ಅವರನ್ನು ಅಮಾನತು ಮಾಡಲಾಗಿದೆ.


Spread the love

About Laxminews 24x7

Check Also

ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಛೇರಿ ಎದುರು ಕರವೇ ಪ್ರತಿಭಟನೆ

Spread the love ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಛೇರಿ ಎದುರು ಕರವೇ ಪ್ರತಿಭಟನೆ ಗೋಕಾಕ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ