Breaking News

ಬಸ್ ನಲ್ಲಿ ಯುವತಿಯ ಮೈಮುಟ್ಟಿ ಕಿರುಕುಳ ಆರೋಪ.. ಠಾಣೆಯ ಮುಂಭಾಗದಲ್ಲಿ ಬಸ್​!

Spread the love

ಉಪ್ಪಿನಂಗಡಿ, ಫೆಬ್ರವರಿ 24: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಮೈಮುಟ್ಟಿ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಬಸ್ ಚಾಲಕ ಮತ್ತು ನಿರ್ವಾಹಕ ಸೇರಿ ಉಪ್ಪಿನಂಗಡಿ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ನಡೆದಿದೆ.

ಪೊಲೀಸರ ವಶದಲ್ಲಿರುವ ಯುವಕನನ್ನು ಚಿಕ್ಕಮಗಳೂರು ನಿವಾಸಿ ಮೊಹಮ್ಮದ್ ಸೈಫುಲ್ಲಾ ಎಂದು ಗುರುತಿಸಲಾಗಿದ್ದು. ಆರೋಪಿಯು ಮಂಗಳವಾರ ಬೆಳಗ್ಗೆ ಧರ್ಮಸ್ಥಳದಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದಾಗ ಕೆಎಸ್​ಆರ್​ಟಿಸಿಯ ಬಸ್​ನಲ್ಲಿ ವಿದ್ಯಾರ್ಥಿನಿಯ ಮೈಮುಟ್ಟಿ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.

ವಿದ್ಯಾರ್ಥಿನಿಯು ಬಸ್ ಚಾಲಕ, ನಿರ್ವಾಹಕರಲ್ಲಿ ಈ ವಿಚಾರ ತಿಳಿಸಿದ್ದು, ತಕ್ಷಣವೇ ಚಾಲಕ ಬಸ್​ನ ಉಪ್ಪಿನಂಗಡಿ ಪೊಲೀಸ್ ಠಾಣೆಯ ಹತ್ತಿರ ನಿಲ್ಲಿಸಿ ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.


Spread the love

About Laxminews 24x7

Check Also

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಬಿಹಾರಕ್ಕೆ ಪ್ರಯಾಣ.

Spread the love ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಸುರಪುರ ಶಾಸಕ ರಾಜಾ ವೇಣುಗೋಪಾಲ ನಾಯಕ ಬಿಹಾರಕ್ಕೆ ಪ್ರಯಾಣ. ಬೆಂಗಳೂರು : …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ