Breaking News

ಲಾರಿ-ಬಸ್ ಮುಖಾಮುಖಿ ಢಿಕ್ಕಿ: ಬಸ್ ಚಾಲಕ, ನಿರ್ವಾಹಕ ಸೇರಿ 7 ಜನರಿಗೆ ಗಾಯ

Spread the love

ಕಲಬುರಗಿ: ಲಾರಿಯ ಟೈಯರ್ ಸ್ಫೋಟವಾಗಿ ಎದುರಿನಿಂದ ಬರುತ್ತಿದ್ದ ಸಾರಿಗೆ ಬಸ್ ಗೆ ಡಿಕ್ಕಿ ಹೊಡೆದ ಘಟನೆ ಜಿಲ್ಲೆಯ ವಾಡಿ ಸಮೀಪದ ರೇವೂರ್ ಗ್ರಾಮದ ಬಳಿ ನಡೆದಿದೆ.

ಘಟನೆಯಲ್ಲಿ ಬಸ್ ಚಾಲಕ ಹಾಗೂ ನಿರ್ವಾಹಕ ಸೇರಿ ಬಸ್ ನಲ್ಲಿದ್ದ ಏಳು ಜನರು ಗಾಯಗೊಂಡಿದ್ದಾರೆ.

ನಗರ ಸಾರಿಗೆ ಬಸ್ ಜೇವರ್ಗಿಯಿಂದ ಚಿತ್ತಾಪುರ ಕಡೆಗೆ ಹೊರಟ್ಟಿತ್ತು. 25 ರಿಂದ 30 ಜನ ಬಸ್ ನಲ್ಲಿದ್ದರು ಎನ್ನಲಾಗಿದೆ. ಈ ವೇಳೆ ಎದುರುಗಡೆಯಿಂದ ಲಾರಿಯ ಟೈಯರ್ ಬ್ಲಾಸ್ಟ್ ಆಗಿದೆ. ಪರಿಣಾಮ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಗೆ ನೇರವಾಗಿ ಗುದ್ದಿದೆ.

ಲಾರಿ ಗುದ್ದಿದ ರಭಸಕ್ಕೆ ಬಸ್ ನ ಚಾಲಕ‌, ನಿರ್ವಾಹಕ ಹಾಗೂ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದೆ‌. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ಚಿತ್ತಾಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಎದುರುಬದುರಾಗಿ ಢಿಕ್ಕಿ ಹೊಡೆದ ಲಾರಿ ಮತ್ತು ಬಸ್ ನ ಮುಂಭಾಗ ಸಂಪೂರ್ಣವಾಗಿ ಖಜಂಗೊಂಡಿದೆ. ಲಾರಿಯು ಪರಿಸಿ ಕಲ್ಲುಗಳನ್ನು ತುಂಬಿಕೊಂಡು ಸಾಗಿಸುತ್ತಿತ್ತು. ಈ ಘಟನೆ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೆಳಗಾವಿಗೆ ಆಗಮಿಸಲಿದ್ದಾರೆ ನಿಸರ್ಗಮನೆ ಖ್ಯಾತಿಯ ಡಾ.ವೆಂಕಟರಮಣ ಹೆಗಡೆ

Spread the loveಬೆಳಗಾವಿ: ಶಿರಸಿ ವೇದ ವೆಲ್‌ನೆಸ್ ಸೆಂಟರ್ ಹಾಗೂ ನಿಸರ್ಗಮನೆ ಖ್ಯಾತ ವೈದ್ಯರಾದ ಡಾ. ವೆಂಕಟರಮಣ ಹೆಗಡೆ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ