Breaking News
Home / Uncategorized / ಪರೀಕ್ಷೆ ಇಲ್ಲದೆ 9 ರಿಂದ 11ನೇ ತರಗತಿಯ ವಿದ್ಯಾರ್ಥಿಗಳನ್ನು ಪಾಸ್ ಮಾಡಿದ ಸರ್ಕಾರ!

ಪರೀಕ್ಷೆ ಇಲ್ಲದೆ 9 ರಿಂದ 11ನೇ ತರಗತಿಯ ವಿದ್ಯಾರ್ಥಿಗಳನ್ನು ಪಾಸ್ ಮಾಡಿದ ಸರ್ಕಾರ!

Spread the love

ಚೆನ್ನೈ : ಕೊರೊನಾ ಮಹಾಮಾರಿಯಿಂದಾಗಿ ಪ್ರಸಕ್ತ ಸಾಲಿನ 9, 10 ಹಾಗೂ ಪ್ರಥಮ ಪಿಯುಸಿಯ ಎಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ, ಉತ್ತೀರ್ಣಗೊಳಿಸಿ ತಮಿಳುನಾಡು ಸಿಎಂ ಕೆ. ಪಳನಿಸ್ವಾಮಿ ಘೋಷಿಸಿದ್ದಾರೆ.

ಅಲ್ಲಿನ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಈ ವರ್ಷ ಶೈಕ್ಷಣಿಕ ಕ್ಷೇತ್ರದ ಮೇಲೆ ಮಹಾಮಾರಿ ತನ್ನ ಪರಿಣಾಮ ಬೀರಿದ್ದು, ವಿದ್ಯಾರ್ಥಿಗಳ, ಶಿಕ್ಷಕರ ಸಮಸ್ಯೆಗಳನ್ನು ಅರ್ಥೈಸಿಕೊಂಡು ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ, ಪಠ್ಯದಲ್ಲಿಯೂ ಕಡಿತಗೊಳಿಸಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಎಲ್ಲಾ ಶಾಲೆಗಳನ್ನು ಬಂದ್ ಮಾಡುವಂತೆ ತಿಳಿಸಿತ್ತು. ವರ್ಷವಿಡೀ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ಬೆಂಬಲಿತ ಶಿಕ್ಷಣ ಚಾನೆಲ್ ಮೂಲಕ ಪಾಠ ಮಾಡಲಾಗಿತ್ತು.


Spread the love

About Laxminews 24x7

Check Also

ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ, ಯುವ ನಾಯಕರಾದ ರಾಹುಲ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ

Spread the love  ಘಟಪ್ರಭಾ : ಪ್ರಾಚೀನ ಕಾಲದಿಂದಲೂ ನಾವು ದೈವ ಭಕ್ತರು. ದೇವರನ್ನು ನಂಬಿ ಬದುಕುತ್ತಿರುವವರು. ದೇವರಿಂದಲೇ ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ