Breaking News
Home / Uncategorized / ಧಾರವಾಡ; ಮಾಸ್ಕ್ ಹಾಕದಿದ್ದರೆ ಮತ್ತೆ ದಂಡ ಕಟ್ಟಲು ಸಿದ್ಧರಾಗಿ

ಧಾರವಾಡ; ಮಾಸ್ಕ್ ಹಾಕದಿದ್ದರೆ ಮತ್ತೆ ದಂಡ ಕಟ್ಟಲು ಸಿದ್ಧರಾಗಿ

Spread the love

ಧಾರವಾಡ, ಫೆಬ್ರವರಿ 25: “ನೆರೆಯ ರಾಜ್ಯಗಳಾದ ಮಹಾರಾಷ್ಟ್ರ ಮತ್ತು ಕೇರಳದಿಂದ ರಸ್ತೆ, ರೈಲು ಮತ್ತು ವಿಮಾನದ ಮೂಲಕ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ಕೊರೊನಾ ನೆಗೆಟಿವ್ ವರದಿಯನ್ನು ಹೊಂದಿರಬೇಕೆಂದು” ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.

ಕೊರೊನಾ ನಿಯಂತ್ರಣ, ಮಾಸ್ಕ್ ಧರಿಸದವರಿಂದ ದಂಡ ಸಂಗ್ರಹ ಮತ್ತು ಮದುವೆ, ಸಭೆ, ಸಮಾರಂಭಗಳಿಗೆ ಮಾರ್ಷಲ್‍ಗಳ ನೇಮಕಾತಿ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿನಿತ್ಯ ಮಹಾರಾಷ್ಟ್ರ ರಾಜ್ಯದಿಂದ ಬಸ್, ರೈಲು, ಲಾರಿ ಮೂಲಕ ಹಾಗೂ ಕೇರಳ ರಾಜ್ಯದಿಂದ ವಿಮಾನದ ಮೂಲಕ ಜಿಲ್ಲೆಗೆ ಪ್ರಯಾಣಿಕರು ಆಗಮಿಸುತ್ತಾರೆ ಎಂದರು.

 

ಕೋವಿಡ್ ನೆಗೆಟಿವ್ ವರದಿ ಇಲ್ಲದ ಪ್ರಯಾಣಿಕರ ಕುರಿತು ನಿಗಾವಹಿಸಲು ಮತ್ತು ನಿಯಮ ಉಲ್ಲಂಘಿಸುವವರ ವಿರುದ್ಧ ಸ್ಥಳದಲ್ಲಿಯೇ ಕ್ರಮ ಜರುಗಿಸಲು ಎಸಿಪಿ, ಡಿವೈಎಸ್‍ಪಿ, ಪಾಲಿಕೆಯ ವಲಯ ಸಹಾಯಕ ಆಯುಕ್ತರ ನೇತೃತ್ವದಲ್ಲಿ ಧಾರವಾಡ ಮತ್ತು ಹುಬ್ಬಳ್ಳಿಗೆ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದರು.

 

ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಿರ್ವಾಹಕರು ಕೊರೊನಾ ನೆಗೆಟಿವ್ ವರದಿಯನ್ನು ಹೊಂದಿರದ ಪ್ರಯಾಣಿಕರನ್ನು ಕರೆದುಕೊಂಡು ಬಂದಿದ್ದರೆ ಅಂತಹವರ ಮೇಲೆ ಕ್ರಮ ಕೈಗೊಳ್ಳಬೇಕು ಅಂತಹ ಬಸ್‍ಗಳನ್ನು ಮುಟ್ಟುಗೋಲು ಹಾಕಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಸೂಚಿಸಿಸಿದರು.

 

ದಂಡ ಹಾಕಲು ಕ್ರಮ ಸಾರ್ವಜನಿಕರು ಮಾಸ್ಕ್ ಧರಿಸುವ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸುವ ಹಾಗೂ ನಿಯಮ ಪಾಲಿಸದವರ ವಿರುದ್ಧ ದಂಡ ವಿಧಿಸುವ ಕ್ರಮವನ್ನು ಕಠಿಣಗೊಳಿಸಬೇಕೆಂದು ಪೊಲೀಸ್ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ದಂಡ ಸಂಗ್ರಹ ಮೊತ್ತ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತ ಡಾ. ಸುರೇಶ್ ಇಟ್ನಾಳ ಮಾತನಾಡಿ, “ಏಪ್ರಿಲ್ 2020 ರಿಂದ ಫೆಬ್ರವರಿ 2021ರ ವರೆಗೆ ಪಾಲಿಕೆಯ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದ 9,504 ಜನರ ಮೇಲೆ ಪ್ರಕರಣ ದಾಖಲಿಸಿ ರೂ. 21,66,900 ಹಾಗೂ ಸಾಮಾಜಿಕ ಅಂತರ ಕಾಪಾಡದ 779 ಜನರ ಮೇಲೆ ಪ್ರಕರಣ ದಾಖಲಿಸಿ ರೂ.1,55,800 ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದ 50 ಜನರ ಮೇಲೆ ಪ್ರಕರಣ ದಾಖಲಿಸಿ ರೂ.8,700 ಗಳು ಸೇರಿದಂತೆ ಒಟ್ಟು ರೂ. 23,31,400 ದಂಡ ಸಂಗ್ರಹ ಮಾಡಲಾಗಿದೆ” ಎಂದರು.

ಧಾರವಾಡ ಸಹಾಯಕ ಪೊಲೀಸ್ ಆಯುಕ್ತೆ ಅನುಷಾ ಜಿ., ಮಾತನಾಡಿ, “ಅವಳಿ ನಗರ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಲ್ಲಿ ಮಾಸ್ಕ್ ಧರಿಸದ ಹಾಗೂ ಸಾಮಾಜಿಕ ಅಂತರ ಕಾಪಾಡದ 1420 ಪ್ರಕರಣಗಳನ್ನು ದಾಖಲಿಸಿದ್ದು ರೂ.3,06,800 ದಂಡ ವಿಧಿಸಲಾಗಿದೆ” ಎಂದು ಹೇಳಿದರು.

ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಇನ್ಸ್‍ಪೆಕ್ಟರ್ ವಿಜಯ ಬಿರಾದಾರ ಮಾತನಾಡಿ, “ಗ್ರಾಮೀಣ ಭಾಗದಲ್ಲಿ ಕಳೆದ ಒಂದು ವಾರದಲ್ಲಿ ಮಾಸ್ಕ್ ಧರಿಸದ 228 ಪ್ರಕರಣಗಳನ್ನು ದಾಖಲಿಸಿ ರೂ.22,800/- ದಂಡ ವಸೂಲು ಮಾಡಲಾಗಿದೆ” ಎಂದು ಮಾಹಿತಿ ನೀಡಿದರು.


Spread the love

About Laxminews 24x7

Check Also

ನೇಹಾ ಹಿರೇಮಠ ಹತ್ಯೆ ಪ್ರಕರಣ; ಎಬಿವಿಪಿ, ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಭುಗಿಲೆದ್ದ ಪ್ರತಿಭಟನೆ; ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ

Spread the love ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣ ಖಂಡಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಎಬಿವಿಪಿ ಕಾರ್ಯಕರ್ತರು, ವಿವಿಧ ಕಾಲೇಜು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ