Breaking News

ಖಾಸಗಿ ಶಾಲೆ ಮಾಲೀಕ ಆತ್ಮಹತ್ಯೆ! ಸಾವಿಗೂ ಮುನ್ನ ಬರೆದ ಡೆತ್​ನೋಟ್​ನಲ್ಲಿದೆ ನೋವು

Spread the love

ಕಲಬುರಗಿ: ವಿಷ ಸೇವಿಸಿ ಖಾಸಗಿ ಶಾಲೆಯ ಮಾಲೀಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ.

ಕಲಬುರಗಿಯ ವಿವೇಕಾನಂದ್ ನಗರದ ನಿವಾಸಿ ಶಂಕರ್ ಬಿರಾದರ್(43) ಮೃತ ದುರ್ದೈವಿ. ಸೇಡಂ ತಾಲೂಕಿನಲ್ಲಿ ಖಾಸಗಿ ಶಾಲೆ ಹೊಂದಿರುವ ಶಂಕರ್ ಬಿರಾದರ್, ಡೆತ್​ನೋಟ್ ಬರೆದಿಟ್ಟು ಮನೆಯಲ್ಲೇ ವಿಷ ಕುಡಿದು ಸತ್ತಿದ್ದಾರೆ.

ಸಾಲಭಾದೆ ಮತ್ತು ಸಾಲಗಾರರ ಕಿರುಳಕ್ಕೆ ಬೇಸತ್ತ ಶಂಕರ್ ಬಿರಾದಾರ್ ಸಾವಿನ ಮನೆಯ ಕದ ತಟ್ಟಿದ್ದಾರೆ. ಖಾಸಗಿ ಶಾಲೆ ನಡೆಸಲು ಸಾಲ ಮಾಡಿಕೊಂಡಿದ್ದರು. ಸಾಲ ಪಾವತಿಸಿಲ್ಲ ಎಂದು ಸಾಲಗಾರರು ಶಾಲಾ ಬಸ್ ಗಳನ್ನು ಸೀಜ್ ಮಾಡಿದ್ದರು. ಇದರಿಂದ ಮನನೊಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಶ್ವವಿದ್ಯಾಲಯದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಂಕರ್ ಬಿರಾದರ್ ಸಾವಿನ ಬಗ್ಗೆ ಗುರುವಾರ ಬೆಳಗ್ಗೆ ಮತ್ತೊಂದು ಖಾಸಗಿ ಶಾಲೆಯ ಮಾಲೀಕ ಬಸವರಾಜ್ ದಿಗ್ಗಾವಿ ಎಂಬುವವರು ಮಾಜಿ ಸಿಎಂ ಕುಮಾರಸ್ವಾಮಿ ಬಳಿ ಅಳಲು ತೋಡಿಕೊಂಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ