Breaking News

ಸಚಿವ ರಮೇಶ್ ಜಾರಕಿಹೊಳಿ, ಬಸವರಾಜ ಬೊಮ್ಮಾಯಿ‌ ಬೆಳಗ್ಗೆ 11 ಗಂಟೆಗೆ

Spread the love

ಬೆಂಗಳೂರು – ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕಾಮಗಾರಿಗಳ ಪ್ರಗತಿ ಪರಿಶೀಲನೆ, ಅಂತರ ರಾಜ್ಯ ಜಲವಿವಾದಗಳು, ಸರ್ವೋಚ್ಚ ನ್ಯಾಯಾಲಯದಲ್ಲಿರುವ ದಾವೆಗಳ ಕುರಿತಂತೆ ಉನ್ನತ ಮಟ್ಟದ ಸಭೆ  (ಫೆ.26) ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆಯಲಿದೆ.

ಈ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ವಹಿಸಲಿದ್ದು, ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯದ ಅಡ್ವೊಕೇಟ್ ಜನರಲ್ ಮತ್ತು ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಹಿರಿಯ ವಕೀಲರು, ಸರ್ಕಾರದ ಅಪರ‌ ಮುಖ್ಯ ಕಾರ್ಯದರ್ಶಿ, ಇಲಾಖೆಯ ಕಾರ್ಯದರ್ಶಿ, ಅಂತರ ರಾಜ್ಯ ಜಲ ವಿವಾದಗಳಿಗೆ ಸಂಬಂಧಿಸಿದ ತಾಂತ್ರಿಕ ಸಮಿತಿ ಸದಸ್ಯರು, ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು, ಜಲಸಂಪನ್ಮೂಲ ಮತ್ತು ಕಾನೂನು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ