ಬೆಂಗಳೂರು: ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಗಾಗಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಈಗಾಗಲೇ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.
18 ಟಿಕೆಟ್ ಆಕಾಂಕ್ಷಿಗಳ ಜೊತೆ ನಾವು ಸಭೆ ನಡೆಸಿದೆವು, ಎಲ್ಲರೂ ಒಗ್ಗಟ್ಟಾಗಿ ಚುನಾವಣೆಯಲ್ಲಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.
ಶುಕ್ರವಾರದಿಂದ ಪ್ರಚಾರ ಕಾರ್ಯ ಆರಂಭವಾಗಲಿದೆ ಎಂದು ಪ್ರಚಾರ ಕಾರ್ಯದ ಉಸ್ತುವಾರಿಯೂ ಆಗಿರುವ ಲಕ್ಷ್ಮಣ ಸವದಿ ಹೇಳಿದ್ದಾರೆ, ಚುನಾವಣಾ ದಿನಾಂಕ ಪ್ರಕಟಿಸುವ ಮೊದಲೇ ಕ್ಷೇತ್ರದ ಎಲ್ಲಾ ಮತದಾರರನ್ನು ಭೇಟಿ ಮಾಡುವುದಾಗಿ ತಿಳಿಸಿದ್ದಾರೆ.
18 ಆಕಾಂಕ್ಷಿಗಳಲ್ಲಿ ಒಬ್ಬರಿಗೆ ಟಿಕೆಟ್ ನೀಡಲಾಗುವುದು, ವಿಜಯೇಂದ್ರ ಅಥವಾ ಲಕ್ಷ್ಮಣ ಸವದಿ ಇಬ್ಬರಲ್ಲಿ ಯಾರಾದರೂ ಕಣಕ್ಕಿಳಿಯಬಹುದು, ಯಾರಿಗೆ ಟಿಕೆಟ್ ನೀಡಬೇಕು ಎಂಬುದನ್ನು ಪಕ್ಷ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.
ಚುನಾವಣಾ ದಿನಾಂಕ ಪ್ರಕಟವಾದ ನಂತರ ಪಕ್ಷ ಅಭ್ಯರ್ಥಿಗಳ ಪಟ್ಟಿ ಮಾಡಿ ಬಿಜೆಪಿ ಹೈಕಮಾಂಡ್ ಗೆ ರವಾನಿಸಲಿದೆ ಎಂದು ಸವದಿ ಹೇಳಿದರು.
2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಈ ಕ್ಷೇತ್ರವನ್ನು ಕಳೆದು ಕೊಂಡಿತ್ತು, ಉಪ ಚುನಾವಣೆಯಲ್ಲಿ ನಮ್ಮ ಗೆಲುವು ಖಚಿತ ಎಂದು ಸವದಿ ತಿಳಿಸಿದ್ದಾರೆ.
Laxmi News 24×7