Breaking News
Home / Uncategorized / ರಸ್ತೆಗಿಳಿಯದ ಲಾರಿ, ಟ್ರಕ್: ಮತ್ತೆ ಮುಷ್ಕರದ ಎಚ್ಚರಿಕೆ

ರಸ್ತೆಗಿಳಿಯದ ಲಾರಿ, ಟ್ರಕ್: ಮತ್ತೆ ಮುಷ್ಕರದ ಎಚ್ಚರಿಕೆ

Spread the love

ಬೆಂಗಳೂರು: ತೈಲ ದರ ಇಳಿಕೆ, ಇ-ವೇ ಬಿಲ್ ನಿಯಮಾವಳಿ ರದ್ದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಲಾರಿ ಮತ್ತು ಟ್ರಕ್ ಸೇರಿದಂತೆ ಸರಕು ಸಾಗಾಣಿಕೆ ವಾಹನ ಮಾಲೀಕರು ದೇಶವ್ಯಾಪಿ ಶುಕ್ರವಾರ ಹಮ್ಮಿಕೊಂಡಿದ್ದ ಮುಷ್ಕರ ಬೆಂಬಲಿಸಿ ನಗರದಲ್ಲೂ ಲಾರಿ ಹಾಗೂ ಟ್ರಕ್‌ಗಳು ಕಾರ್ಯಾಚರಣೆ ಸ್ಥಗಿತಗೊಳಿಸಿದ್ದವು.

ಬೆಂಗಳೂರು-ತುಮಕೂರು ಹೆದ್ದಾರಿಯ ಮಾದನಾಯಕನಹಳ್ಳಿ ನೈಸ್ ರಸ್ತೆ ಜಂಕ್ಷನ್‍ನಲ್ಲಿ ರಾಜ್ಯ ಲಾರಿ ಮಾಲೀಕರು ಹಾಗೂ ಏಜೆಂಟರ ಸಂಘಗಳ ಒಕ್ಕೂಟದ ವತಿಯಿಂದ ಲಾರಿಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಲಾಯಿತು. ಇದರಿಂದ ಕಿಲೋಮೀಟರ್ಗ‌ಟ್ಟಲೆ ವಾಹನಗಳು ನಿಲ್ಲಬೇಕಾಯಿತು. ಪ್ರತಿಭಟನೆಯಿಂದ ವಾಹನ ದಟ್ಟಣೆ ಹಾಗೂ ಸವಾರರು ಹೈರಾಣಾದರು.‌

ಬೇಡಿಕೆಗಳನ್ನು ಈಡೇರಿಸುವಂತೆ ಲಾರಿ ಮಾಲೀಕರು ಹೆದ್ದಾರಿ ತಡೆಗೂ ಮುಂದಾಗಿದ್ದರು. ಆದರೆ, ಪೊಲೀಸರು ಇದಕ್ಕೆ ಅವಕಾಶ ನೀಡಲಿಲ್ಲ. ಇದರಿಂದ ಮಾಲೀಕರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು.

ಅಗತ್ಯ ವಸ್ತುಗಳನ್ನು ಪೂರೈಸುವ ವಾಹನಗಳನ್ನು ಹೊರತುಪಡಿಸಿ, ಉಳಿದೆಲ್ಲಾ ವಾಹನಗಳು ರಸ್ತೆಗೆ ಇಳಿಯಲಿಲ್ಲ. ರಾಜ್ಯದಾದ್ಯಂತ ಸುಮಾರು ಆರು ಲಕ್ಷ ಲಾರಿಗಳು ಸ್ತಬ್ಧವಾಗಿದ್ದವು.

‘ತೈಲ ದರ ಏರಿಕೆ, ಬಿಎಸ್ 6 ವಾಹನಗಳ ಬಿಡಿಭಾಗಗಳ ದರ ಹೆಚ್ಚಳ ಹಾಗೂ ತೆರಿಗೆ ಹೆಚ್ಚಳದಿಂದ ಸರಕು ಸಾಗಾಣಿಕೆ ಉದ್ಯಮಕ್ಕೆ ಬಹಳ ತೊಂದರೆಯಾಗಿದೆ. ಬೇರೆ ರಾಜ್ಯಗಳಲ್ಲಿ ತೈಲದರ ಇಳಿಸಲಾಗಿದೆ. ಡೀಸೆಲ್ ಮೇಲೆ ಪ್ರತಿ ಲೀಟರ್‌ಗೆ ₹3 ಕಡಿಮೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದೇವೆ’ ಎಂದು ರಾಜ್ಯ ಲಾರಿ ಮಾಲೀಕರು ಹಾಗೂ ಏಜೆಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಜಿ.ಆರ್.ಷಣ್ಮುಗಪ್ಪ ಆಗ್ರಹಿಸಿದರು.

‘ಇ-ವೇ ಬಿಲ್‌ನ ಪ್ರಮಾಣವನ್ನು ಕಡಿಮೆ ಮಾಡಬೇಕು. ರಾಜ್ಯದಲ್ಲಿ ಕೂಡಲೇ ಡೀಸೆಲ್‌ ದರ ಕಡಿಮೆ ಮಾಡಬೇಕು. ನೈಸ್‌ ರಸ್ತೆಯಲ್ಲಿ ಹಲವು ಟೋಲ್‌ಗಳಿದ್ದು, ಕೂಡಲೇ ಫಾಸ್ಟ್‌ ಟ್ಯಾಗ್ ಅಳವಡಿಸಬೇಕು. ಮರಳು ನೀತಿ ಜಾರಿ ಮಾಡಬೇಕು’ ಎಂದು

ಗುಜರಿ ನೀತಿ ಬೇಡ:’ಕೇಂದ್ರ ಸರ್ಕಾರದ ಗುಜರಿ ನೀತಿ ಜಾರಿಗೆ ನಮ್ಮ ವಿರೋಧವಿದೆ. ವಾಹನ ಉತ್ಪಾದಕ ಕಂಪನಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ಈ ನೀತಿ ರೂಪಿಸಲಾಗಿದೆ. ಈ ಹೊಸ ನೀತಿಯಿಂದ ಲಾರಿ ಮಾಲೀಕರೂ ಬೀದಿಗೆ ಬರಲಿದ್ದಾರೆ. ಒಂದು ವೇಳೆ ನೀತಿ ಜಾರಿಯಾದರೆ, ಹಳೆಯ ವಾಹನಗಳಿಗೆ


Spread the love

About Laxminews 24x7

Check Also

ಚುನಾವಣೆ ಚೆಕಿಂಗ್; ದಾಖಲೆ ಇಲ್ಲದ 20 ಲಕ್ಷಕ್ಕೂ ಅಧಿಕ ವಶ.!

Spread the love ಚಿತ್ರದುರ್ಗ; ಚಿತ್ರದುರ್ಗದಲ್ಲಿ ವಾಹನ ಒಂದರಲ್ಲಿ ವ್ಯಕ್ತಿಯೊಬ್ಬರು ದಾಖಲೆ ಇಲ್ಲದೆ ಸುಮಾರು 20 ಲಕ್ಷಕ್ಕೂ ಅಧಿಕ ಹಣವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ