Breaking News

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

Spread the love

ಬೆಂಗಳೂರು: ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಮತ್ತೆ ಒಂದು ತಿಂಗಳವರೆಗೆ ವಿಸ್ತರಿಸಲಾಗಿದೆ. ಕೆಎಸ್‌ಆರ್ಟಿಸಿ ಬಸ್ ಗಳಲ್ಲಿ ವಿದ್ಯಾರ್ಥಿಗಳು 2019 – 20 ನೇ ಸಾಲಿನ ಬಸ್ ಪಾಸ್ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ಫೆಬ್ರವರಿ 28 ರ ವರೆಗೆ ಕಳೆದ ಶೈಕ್ಷಣಿಕ ಸಾಲಿನ ಬಸ್ ಪಾಸ್ ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿತ್ತು. ಇದನ್ನು ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು ಕಳೆದ ವರ್ಷದ ಪಾಸ್ ಹಾಗೂ ಪ್ರಸಕ್ತ ಸಾಲಿನಲ್ಲಿ ಶಾಲಾ ಕಾಲೇಜುಗಳಿಗೆ ಪ್ರವೇಶ ಪಡೆದು ಶುಲ್ಕ ಪಾವತಿಸಿದ ರಸೀದಿ ತೋರಿಸಿ ಮಾರ್ಚ್ 31 ರವರೆಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಕ್ರಮ: ಕೃಷ್ಣ ಭೈರೇಗೌಡ

Spread the loveಬೆಂಗಳೂರು: ಇರಾನ್- ಇಸ್ರೇಲ್ ಯುದ್ಧದಿಂದಾಗಿಮಧ್ಯ ಪ್ರಾಚ್ಯದಲ್ಲಿ ಸಿಲುಕಿರೋ ಕರ್ನಾಟಕದವರ ರಕ್ಷಣೆಗೆ ಕರ್ನಾಟಕ ಸರ್ಕಾರ ಕ್ರಮವಹಿಸಿದೆ ಅಂತ ಕಂದಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ