Breaking News

ಲೈಂಗಿಕ ಕಿರುಕುಳ ಪ್ರಕರಣವನ್ನು ಮುಚ್ಚಿಡಲು ಅವಕಾಶ ನೀಡಲಾಗದು: ಸುಪ್ರೀಂಕೋರ್ಟ್

Spread the love

ನವದೆಹಲಿ: ‘ಲೈಂಗಿಕ ಕಿರುಕುಳದ ಪ್ರಕರಣಗಳನ್ನು ಯಾವುದೇ ರೀತಿಯಲ್ಲೂ ಮುಚ್ಚಿಡಲು ಸಾಧ್ಯವಾಗದು’ ಎಂದು ಜಿಲ್ಲಾ ನಿವೃತ್ತ ನ್ಯಾಯಾಧೀಶರ ವಿರುದ್ಧ ಮಧ್ಯಪ್ರದೇಶ ಹೈಕೋರ್ಟ್ ಜಾರಿಗೊಳಿಸಿರುವ ಆಂತರಿಕ ಇಲಾಖಾ ತನಿಖೆಯನ್ನು ರದ್ದುಗೊಳಿಸಲು ಕೋರಿ ಸಲ್ಲಿಸಿದ್ದ ಮನವಿಯ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಅಭಿಪ್ರಾಯವನ್ನು ನೀಡಿದೆ.

ಮಧ್ಯಪ್ರದೇಶದ ನಿವೃತ್ತ ನ್ಯಾಯಾಧೀಶ ಶಂಭೂ ಸಿಂಗ್ ರಘುವಂಶಿ ಅವರು ಕಿರಿಯ ಮಹಿಳಾ ನ್ಯಾಯಾಂಗ ಅಧಿಕಾರಿಯೊಬ್ಬರಿಗೆ ವ್ಯಾಟ್ಸ್‌ಆಯಪ್‌ನಲ್ಲಿ ಅನುಚಿತವಾದ ಸಂದೇಶಗಳನ್ನು ಕಳುಹಿಸಿದ್ದರು. ಈ ಸಂಬಂಧ ಅಧಿಕಾರಿಯು ದೂರು ಸಲ್ಲಿಸಿದ್ದು, ದೂರಿನ ಆಧಾರದ ಮೇಲೆ ಜಿಲ್ಲಾ ನಿವೃತ್ತ ನ್ಯಾಯಾಧೀಶರ ವಿರುದ್ಧ ಮಧ್ಯಪ್ರದೇಶ ಹೈಕೋರ್ಟ್ ಆಂತರಿಕ ಇಲಾಖಾ ತನಿಖೆಗೆ ಆದೇಶ ನೀಡಿತ್ತು.

ಫೆ. 16ರಂದು ನಡೆದ ನ್ಯಾಯಾಲಯದ ವಿಚಾರಣೆಯಲ್ಲಿ ನಿವೃತ್ತ ನ್ಯಾಯಾಧೀಶರು ತಮ್ಮ ಕಿರಿಯ ಅಧಿಕಾರಿಗೆ ವಾಟ್ಸ್ ಆಯಪ್‌ನಲ್ಲಿ ಅನುಚಿತವಾದ ಸಂದೇಶಗಳನ್ನು ಕಳಹಿಸಿದ್ದನ್ನು ಒಪ್ಪಿಕೊಂಡಿದ್ದು, ತಾನು ಕೇವಲ ಫ್ಲರ್ಟಿಂಗ್ ಮಾಡುತ್ತಿದ್ದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಅಲ್ಲದೇ ತಮ್ಮದು ಕೇವಲ ‘ಫ್ಲರ್ಟಿಂಗ್’ ಎಂದೂ ಸಮರ್ಥನೆ ಮಾಡಿಕೊಂಡಿದ್ದರು.

ಕಿರಿಯ ಅಧಿಕಾರಿಯ ಜತೆ ‘ಫ್ಲರ್ಟ್‌’ ಮಾಡುವುದು ನ್ಯಾಯಾಧೀಶರ ನಡವಳಿಕೆಗೆ ತಕ್ಕುದಲ್ಲ. ಇಂತಹ ನಡವಳಿಕೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಈ ಹಿಂದೆ ನೀಡಿದ ಆದೇಶವನ್ನು ರದ್ದುಗೊಳಿಸಲು ಕೋರಿ ಸಲ್ಲಿಸಿದ್ದ ಮನವಿಯನ್ನು, ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬಡೆ, ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಮತ್ತು ವಿ. ರಾಮಸುಬ್ರಣಿಯನ್ ಅವರನ್ನೊಳಗೊಂಡ ನ್ಯಾಯಪೀಠವು ನಿರಾಕರಿಸಿದೆ.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ