Breaking News

ಇಂಜಿನೀರಿಂಗ್ ವಿದ್ಯಾರ್ಥಿ ಕಾಲೇಜು ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ

Spread the love

ಬೆಂಗಳೂರು: ಇಂಜಿನಿಯರಿಂಗ್​ ವಿದ್ಯಾರ್ಥಿಯೊಬ್ಬ ಕಾಲೇಜು ಕಟ್ಟಡ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜ್ಯ ರಾಜಧಾನಿಯಲ್ಲಿ ಸಂಭವಿಸಿದೆ.

ಜಯಂತ್ ರೆಡ್ಡಿ ಮೃತ ದುರ್ದೈವಿ. ವಿವಿ ಪುರಂನಲ್ಲಿರುವ ಬೆಂಗಳೂರು ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಸೋಮವಾರ ಬೆಳಗ್ಗೆ ಈ ಅವಘಡ ಸಂಭವಿಸಿದೆ.
ಕಾಲೇಜಿನ ನಾಲ್ಕನೇ ಮಹಡಿಯಿಂದ ಹಾರಿ ಜಯಂತ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ವಿವಿ ಪುರಂ ಪೊಲೀಸರು ಪರಿಶೀಲನೆ ನಡೆಸಿ ವಿದ್ಯಾರ್ಥಿಯ ಶವವನ್ನು ಕಿಮ್ಸ್​ ಆಸ್ಪತ್ರೆಗೆ ಸಾಗಿಸಿದ್ದಾರೆ.

ಮೃತ ಜಯಂತ್ ರೆಡ್ಡಿ ಬೆಂಗಳೂರು ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಬಿಇ ಮೂರನೇ ಸೆಮಿಸ್ಟರ್​ ಓದುತ್ತಿದ್ದ.

ಇಂದು ಇಯರ್ ಬ್ಯಾಕ್ ಆಗಿದ್ದ ಪರೀಕ್ಷೆ ಬರೆಯಲು ಬಂದಿದ್ದ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಕಾಲೇಜಿನ ಶುಲ್ಕದ ವಿಚಾರಕ್ಕೆ ಬೇಸರವಾಗಿತ್ತೆ? ಪರೀಕ್ಷೆ ಬರೆಯುವ ವಿಚಾರಕ್ಕೆ ಟೆನ್ಷನ್ ಆಗಿತ್ತೇ? ಎಂಬ ಅನುಮಾನ ಮೂಡಿದೆ. ತನಿಖೆ ಬಳಿಕ ಸತ್ಯಾಸತ್ಯತೆ ಹೊರಬರಲಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ