Breaking News
Home / Uncategorized / 100 ವಿಧಾನಸಭಾ ಕ್ಷೇತ್ರದಲ್ಲಿ ಮಹಿಳಾ ಆಕ್ರೋಶ ಜಾಥಾ

100 ವಿಧಾನಸಭಾ ಕ್ಷೇತ್ರದಲ್ಲಿ ಮಹಿಳಾ ಆಕ್ರೋಶ ಜಾಥಾ

Spread the love

ಚಿಕ್ಕಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ಮತ್ತು ಜನ ವಿರೋಧಿ ಧೋರಣೆಗಳನ್ನು ಅನುಸರಿಸುತ್ತಿದೆ ಎಂದುಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಡಾ.ಪುಷ್ಪಅಮರನಾಥ್‌ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಮಹಿಳಾ ವಿಭಾಗದ ಪದಾಧಿಕಾರಿಗಳೊಂದಿಗೆ ಜನಧ್ವನಿ ಹೋರಾಟದ ಅಂಗವಾಗಿ ಆಯೋಜಿಸಿದ ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಚುನಾವಣಾ ಪ್ರಣಾಳಿಕೆಯ ವಾಗ್ಧಾನಗಳನ್ನು ಈಡೇರಿಸ  ಬೇಕೆಂದು ಆಗ್ರಹಿಸಿ ಪ್ರಸಕ್ತ ಸಾಲಿನಲ್ಲಿ ರಾಜ್ಯದ 100 ವಿಧಾನಸಭಾ ಕ್ಷೇತ್ರದಲ್ಲಿ ಮಹಿಳಾ ಘಟಕದಿಂದ ಮಹಿಳಾ ಆಕ್ರೋಶ ಜಾಥಾ ಹೋರಾಟ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರ್‌ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಮುಖಂಡರಿಂದ ಚಾಲನೆ: ಬೆಂಗಳೂರಿನಲ್ಲಿ ಮಾ.2 ರಂದು ಮಹಿಳಾ ಆಕ್ರೋಶದ ರ್ಯಾಲಿಗೆ ಚಾಲನೆ ನೀಡಿ ನಂತರ ರಾಜ್ಯದ 100 ಕ್ಷೇತ್ರಗಳಲ್ಲಿ ಹೋರಾಟ ನಡೆಸಲಾಗುತ್ತದೆ. ಜನವಿರೋಧಿ ಧೋರಣೆ ಹಾಗೂ ಪೆಟ್ರೋಲ್‌, ಡೀಸೆಲ್‌ ಹಾಗೂ ಅಗತ್ಯವಸ್ತುಗಳ ಬೆಲೆ ಏರಿಕೆ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿನಡೆಯುತ್ತಿರುವ ಜನಧ್ವನಿ ಯಾತ್ರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್‌ ಮುಖಂಡರು ಚಾಲನೆ ನೀಡಲಿದ್ದಾರೆ ಎಂದರು.

ಬೆಲೆ ಏರಿಕೆ ವಿರುದ್ಧ ನಡೆಯುತ್ತಿರುವ ಹೋರಾಟದಲ್ಲಿ ಮಹಿಳೆಯರು ಪಕ್ಷಾತೀತವಾಗಿ ಭಾಗವಹಿಸಬೇಕು. ಬೆಲೆ ಏರಿಕೆಯಿಂದ ಕಾಂಗ್ರೆಸ್‌ ಪಕ್ಷದವರು ಸಂಕಷ್ಟ ಎದುರಿಸುತ್ತಿಲ್ಲ. ಜನಪರವಾಗಿ ನಡೆಸುತ್ತಿರುವ ಹೋರಾಟದಲ್ಲಿ ಹೆಚ್ಚಿನಸಂಖ್ಯೆಯಲ್ಲಿ ಭಾಗವಹಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲಾ ಮಹಿಳಾಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಜನರಲ್ಲಿ ಅರಿವುಮತ್ತು ಜಾಗೃತಿ ಮೂಡಿಸಬೇಕೆಂದರು. ಸುದ್ದಿಗೋಷ್ಠಿಯಲ್ಲಿ ಜಿಪಂ ಉಪಾಧ್ಯಕ್ಷೆ ಸರಸ್ವಮ್ಮ ಅಶ್ವತ್ಥ ನಾರಾಯಣಗೌಡ, ಕೆಪಿಸಿಸಿ ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಧಾ, ರಾಜ್ಯಕಾರ್ಯದರ್ಶಿ ಯಾಸ್ಮಿನ್‌ತಾಜ್‌, ಮಮತಾಮೂರ್ತಿ, ಚಿಕ್ಕಬಳ್ಳಾಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜಯರಾಮ್‌, ಪ್ರಧಾನಕಾರ್ಯದರ್ಶಿ ಸೂರಿ, ಜಿಲ್ಲಾ ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ಸುಮಿತ್ರಾ, ಜಿಲ್ಲಾ ಕಾರ್ಯದರ್ಶಿ ಶಾಹೀನ್‌ತಾಜ್‌, ಮುಖಂಡ ರಾದ ಮೊಹಮ್ಮದ್‌ ಹಫೀಜ್‌ ಮತ್ತಿತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ’ : ನಿರ್ಮಲಾ ಸೀತಾರಾಮನ್ ಘೋಷಣೆ

Spread the loveನವದೆಹಲಿ : ಲೋಕಸಭಾ ಚುನಾವಣೆಯಲ್ಲಿ ಖರ್ಚು ಮಾಡಲು ಹಣವಿಲ್ಲದ ಕಾರಣ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹಣಕಾಸು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ