Breaking News

ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ

Spread the love

ತಿರುಪತಿ : ತಿರುಪತಿ ವಿಮಾನ ನಿಲ್ದಾಣದಲ್ಲಿ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಂದ್ರಬಾಬು ನಾಯ್ಡು ಚಿತ್ತೂರು ಜಿಲ್ಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ಹಾಜರಾಗಲು ತೆರಳುತ್ತಿದ್ದ ವೇಳೆ, ಅವರನ್ನು ಏರ್​ಪೋರ್ಟ್​ನಲ್ಲೇ ರೇನಿಗುಂಟಾ ಪೊಲೀಸರು ತಡೆದಿದ್ದಾರೆ. ಇದನ್ನು ಅಲ್ಲಿಯೇ ಖಂಡಿಸಿದ ಅವರು ಬೇಕಾದರೆ ನನ್ನನ್ನು ಬಂಧಿಸಿ.ಆದರೆ ನಿರ್ಭಂಧಿಸಬೇಡಿ. ಇಲ್ಲಿ ಏನು ನಡೆಯುತ್ತಿದೆ? ನಾನು ಯಾರನ್ನಾದರೂ ಕೊಲ್ಲಲು ಹೋಗುತ್ತಿದ್ದೇನಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಷ್ಟೇ ಅಲ್ಲದೆ, ವಿಮಾನ ನಿಲ್ದಾಣದಲ್ಲೇ ಪ್ರತಿಭಟನೆ ನಡೆಸಲು ಕುಳಿತಿದ್ದಾರೆ. ಈ ವೇಳೆ ರೇನಿಗುಂಟಾ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ