Breaking News

ವೇಶ್ಯಾವಾಟಿಕೆ ಅಡ್ಡೆಗೆ ದಾಳಿ

Spread the love

ಮಂಗಳೂರು,ಮಾ.01(ಹಿ.ಸ): ನಗರ ದ ಹೊರ ವಲಯದ ಸುರತ್ಕಲ್ ನಲ್ಲಿ ಲಾಡ್ಜ್ ವೊಂದರಲ್ಲಿ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ನಡೆಸಿದ ಮಂಗಳೂರು ಪೊಲೀಸರು ಬೆಂಗಳೂರಿನ ಯುವತಿಯನ್ನು ರಕ್ಷಿಸಿದ್ದಾರೆ. ಈ ಯುವತಿಯನ್ನು ಇಟ್ಟುಕೊಂಡು ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು.

ಪೊಲೀಸರು ದಾಳಿ ನಡೆಸಿ ಯುವತಿಯನ್ನು ರಕ್ಷಿಸಿ ಇಬ್ಬರನ್ನು ಬಂಧಿಸಿದ್ದಾರೆ. ಮಂಗಳೂರು ತಾಲೂಕು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳ ಗ್ರಾಮದ BASF ಫ್ಯಾಕ್ಟರಿಯ ಎದುರುಗಡೆಯ ಫೆರಾವೊ ಕಾಂಪ್ಲೇಕ್ಸ್ ನಲ್ಲಿರುವ ಫೆರಾವೊ ಲಾಡ್ಜಿಂಗ್ & ಬೋರ್ಡಿಂಗ್ ನ ರೂಮ್ ನಂ-205 ರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿತ್ತು. ಇಲ್ಲಿಗೆ ದಾಳಿ ನಡೆಸಿದ ಪೊಲೀಸರು ಹಳೆಯಂಗಡಿಯ ಹರೀಶ್ (42) ಬಂಟ್ವಾಳ ತಾಲೂಕಿನ ದಡ್ಡಲ್ ಕಾಡ್ ನ ಲೋಕನಾಥ್ ಫೂಜಾರಿ ನವೀನ್ (42) ಎಂಬವರನ್ನು ಬಂಧಿಸಿದ್ದಾರೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ