Breaking News

ಶೌರ್ಯ ಪ್ರಶಸ್ತಿ ಪುರಸ್ಕೃತರ ಗೌರವಧನ ಹೆಚ್ಚಳ : ಸಿಎಂ ಘೋಷಣೆ

Spread the love

ಬೆಂಗಳೂರು,ಮಾ.2- ಪರಮ ವೀರಚಕ್ರ, ಅಶೋಕಚಕ್ರ ಸೇರಿದಂತೆ ಶೌರ್ಯ ಪ್ರಶಸ್ತಿ ಪುರಸ್ಕೃತರಿಗೆ ನೀಡಲಾಗುವ ಗೌರವಧನವನ್ನು ಹೆಚ್ಚಳ ಮಾಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದರು. 1971ರಲ್ಲಿ ನಡೆದ ಭಾರತ-ಪಾಕಿಸ್ತಾನ ಯುದ್ಧದಲ್ಲಿ ದೇಶ ವಿಜಯಗಳಿಸಿದ ಸ್ಮರಣಾರ್ಥ ಇಂದು ವಿಧಾನಸೌಧ ಮುಂಭಾಗ ಆಯೋಜಿಸಿದ್ದ 50ನೇ ಸ್ವರ್ಣಿಂ ವಿಜಯ ವರ್ಷಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪರಮವೀರ ಚಕ್ರ, ಅಶೋಕ ಚಕ್ರ ಪ್ರಶಸ್ತಿ ಪುರಸ್ಕøತರಿಗೆ ನೀಡಲಾಗುತ್ತಿದ್ದ 25 ಲಕ್ಷ ರೂ.ಗಳಿಂದ ಒಂದು ಕೋಟಿ ರೂ.ಗೆ ಹೆಚ್ಚಳ ಮಾಡಲಾಗಿದೆ ಎಂದು ಪ್ರಕಟಿಸಿದರು. ಕೀರ್ತಿಚಕ್ರ ಮತ್ತು ಮಹಾ ವೀರ ಪ್ರಶಸ್ತಿ ಪುರಸ್ಕøತರಿಗೆ 12 ಲಕ್ಷದಿಂದ 50 ಲಕ್ಷ ರೂಗಳಿಗೆ ವೀರಚಕ್ರ ಮತ್ತು ಶೌರ್ಯ ಚಕ್ರ ಪುರಸ್ಕøತರಿಗೆ 25 ಲಕ್ಷ ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ