Breaking News

ಒಕ್ಕಲಿಗರ ಮೀಸಲಾತಿಗಾಗಿ ಬೀದಿಗಿಳಿದು ಹೋರಾಡಲ್ಲ : ನಿರ್ಮಲಾನಂದನಾಥ ಶ್ರೀ

Spread the love

ಬೆಂಗಳೂರು,ಮಾ.2- ನಮ್ಮ ಸಮುದಾಯದ ಬಡವರ ಅಭಿವೃದ್ಧಿಗಾಗಿ ಮೀಸಲಾತಿ ಅಗತ್ಯವಿದೆ. ಈ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡುತ್ತೇವೆ ಹೊರತು ಬೀದಿಗಿಳಿದು ಹೋರಾಟ ಮಾಡುವ ಅಗತ್ಯ ಸದ್ಯಕ್ಕಿಲ್ಲ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ಶ್ರೀ.ನಿರ್ಮಲಾನಂದನಾಥ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿ ಕುವೆಂಪು ಸಭಾಂಗಣದಲ್ಲಿ ಒಕ್ಕಲಿಗರ ಮೀಸಲಾತಿ-ಸಮುದಾಯದ ಜೀವಶಕ್ತಿ ಕುರಿತು ನಡೆದ ಬೃಹತ್ ಸಭೆಯಲ್ಲಿ ಶ್ರೀಗಳು ಮಾತನಾಡಿದರು.

ನಮ್ಮದು ಸುಸಂಸ್ಕøತ ಮತ್ತು ನಾಗರಿಕ ಪ್ರಜ್ಞೆ ಇರುವ ಸಮುದಾಯ. ಬೀದಿಗಿಳಿದು ಹೋರಾಟ ಮಾಡುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಸರ್ಕಾರದಲ್ಲಿ ಜವಾಬ್ದಾರಿ ಹೊತ್ತಿರುವ ಜನಪ್ರತಿನಿಗಳ ಮುಂದೆ ಬೇಡಿಕೆಗಳನ್ನಿಟ್ಟು ಮನವಿ ಮಾಡಿಕೊಂಡಿದ್ದೇವೆ ಎಂದು ಹೇಳಿದರು.ನಮ್ಮ ಸಮುದಾಯದ ಅನೇಕ ಬಡವರು ಕೊಳಗೇರಿಗಳಲ್ಲಿ ವಾಸಿಸುತ್ತಿದ್ದಾರೆ. ಅವರನ್ನು ಒಬಿಸಿಯಿಂದ ಹೊರಗಿಟ್ಟಿರುವುದು ಸರಿಯಲ್ಲ. ಶಾಂತಿ ಮಾರ್ಗ ಅನುಸರಿಸಿ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ. ಸಮುದಾಯದಲ್ಲಿರುವ ಬಡವರ ಶ್ರೇಯೋಭಿವೃದ್ಧಿಗಾಗಿ ಅಭಿವೃದ್ಧಿ ನಿಗಮ ಸ್ಥಾಪಿಸುವ ಅಗತ್ಯವಿದೆ ಎಂದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ