Breaking News

ಲಂಚ ಪಡೆದು ಸಿಕ್ಕಿಬಿದ್ದಿದ್ದ ದೇವೇಂದ್ರಪ್ಪ ಅವರ ಆಪ್ತರಿಗೆ ಎಸಿಬಿ ಶಾಕ್..!

Spread the love

ಬೆಂಗಳೂರು, ಮಾ.2- ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದು ಸೇವೆಯಿಂದ ಅಮಾನತುಗೊಂಡಿರುವ ಬಿಬಿಎಂಪಿ ನಗರ ಯೋಜನೆ ವಿಭಾಗದ ಸಹಾಯಕ ಅಭಿಯಂತರ ದೇವೇಂದ್ರಪ್ಪ ಅವರ ಆಪ್ತರ ಮನೆ ಮೇಲಿನ ದಾಳಿಯನ್ನು ಎಸಿಬಿ ಮುಂದುವರೆಸಿದೆ. ದೇವೇಂದ್ರಪ್ಪ ಅವರ ಆಪ್ತ ಶ್ರೀನಿವಾಸ ಮೂರ್ತಿ ಅವರ ಅಲಸೂರು ಗುಪ್ತ ಲೇ ಔಟ್‍ನಲ್ಲಿರುವ ನಿವಾಸದ ಮೇಲೆ ಹಾಗೂ ದೇವೇಂದ್ರಪ್ಪ ಅವರ ಅಮೃತನಗರದ ಸಿ ಸೆಕ್ಟರ್ ಮನೆ ಮೇಲೆ ಎಸಿಬಿ ಪೊಲೀಸರು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ಬಿಬಿಎಂಪಿ ಬೊಮ್ಮನಹಳ್ಳಿ ವಲಯದ ನಗರ ಯೋಜನೆ ವಿಭಾಗದಲ್ಲಿ ಪ್ರಭಾರ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ದೇವೇಂದ್ರಪ್ಪ ಅವರು ಖಾಸಗಿ ಸಂಸ್ಥೆಯೊಂದರ ಕಟ್ಟಡ ಕಾಮಗಾರಿಗೆ ಒಸಿ ನೀಡಲು 20 ಲಕ್ಷದ ಹಣದ ಬೇಡಿಕೆ ಇಟ್ಟಿದ್ದರು. ಲಂಚದ ಹಣ ಸ್ವೀಕರಿಸುತ್ತಿದ್ದಾಗ ಕಳೆದ ಫೆ.5ರಂದು ಎಸಿಬಿ ಪೊಲೀಸರಿಗೆ ದೇವೇಂದ್ರಪ್ಪ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದರು. ದೇವೇಂದ್ರಪ್ಪ ಅವರನ್ನು ವಶಕ್ಕೆ ಪಡೆದಾಗ ಅವರ ನಿವಾಸದಲ್ಲಿ ಬಿಬಿಎಂಪಿಗೆ ಸಂಬಂಸಿದ ಹಲವಾರು ಕಡತಗಳು, ಕೋಟಿಗಟ್ಟಲೆ ಹಣ ಸಿಕ್ಕಿತ್ತು.

ದೇವೇಂದ್ರಪ್ಪ ಅವರು ಅಕ್ರಮ ಆಸ್ತಿ ಸಂಪಾದಿಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಅವರನ್ನು ಬಿಬಿಎಂಪಿ ಸೇವೆಯಿಂದ ಅಮಾನತು ಪಡಿಸಲಾಗಿದೆ. ದೇವೇಂದ್ರಪ್ಪ ಅಕ್ರಮಗಳ ಬೆನ್ನತ್ತಿರುವ ಎಸಿಬಿ ಪೊಲೀಸರಿಗೆ ಬಗೆದಷ್ಟು ಕರ್ಮಕಾಂಡ ಬಯಲಾಗುತ್ತಿರುವುದರಿಂದ ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ.ಇಂದು ಮುಂಜಾನೆ ಅವರ ಆಪ್ತ ಶ್ರೀನಿವಾಸ ಮೂರ್ತಿ ಅವರ ನಿವಾಸ ಹಾಗೂ ಅಮೃತ್‍ನಗರದಲ್ಲಿರುವ ದೇವೇಂದ್ರಪ್ಪ ಅವರ ನಿವಾಸಗಳ ಮೇಲೆ ಏಕ ಕಾಲಕ್ಕೆ ದಾಳಿ ನಡೆಸಿ ದಾಖಲೆಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ದೇವೇಂದ್ರಪ್ಪ ಪ್ರಕರಣದಲ್ಲಿ ಇನ್ನು ಹೆಚ್ಚಿನ ಸ್ಥಳಗಳ ಪರಿಶೀಲನೆ ನಡೆಸಬೇಕಾಗಿದ್ದು , ತನಿಖೆಯನ್ನು ಮುಂದುವರೆಸಲಾಗಿದೆ ಎಂದು ಎಸಿಬಿ ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ