Breaking News
Home / ರಾಜ್ಯ / ಜೀವಂತ ಇರುವ ವ್ಯಕ್ತಿಯನ್ನು ಪೋಸ್ಟ್ ಮಾರ್ಟಮ್ ಗೆ ಕಳಿಸಿದ ಆಸ್ಪತ್ರೆ ಸಿಬ್ಬಂದಿ

ಜೀವಂತ ಇರುವ ವ್ಯಕ್ತಿಯನ್ನು ಪೋಸ್ಟ್ ಮಾರ್ಟಮ್ ಗೆ ಕಳಿಸಿದ ಆಸ್ಪತ್ರೆ ಸಿಬ್ಬಂದಿ

Spread the love

ಬಾಗಲಕೋಟೆ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಭಾವಿಸಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳು ಮರಣೋತ್ತರ ಪರೀಕ್ಷೆಗಾಗಿ ಜೀವಂತ ವ್ಯಕ್ತಿಯನ್ನೇ ಕಳುಹಿಸಿರುವ ಎಡವಟ್ಟು ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ.

ಶಂಕರ್ ಗೊಂಬಿ ಎಂಬ 27 ವರ್ಷದ ವ್ಯಕ್ತಿಗೆ ಕಾರು ಅಪಘಾತದಲ್ಲಿ ತಲೆಗೆ ಗಂಭೀರವಾದ ಗಾಯವಾಗಿತ್ತು. ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ವೆಂಟಿಲೇಟರ್ ಅಳವಡಿಸಿ ಶಂಕರ್ ಅವರನ್ನು ಮಹಾಲಿಂಗಪುರ ಆಸ್ಪತ್ರೆಗೆ ದಾಖಲಿಸುವಂತೆ ಹೇಳಿದ್ದರು. ಮಾರ್ಗ ಮಧ್ಯೆಯೇ ಶಂಕರ್ ಮೃತಪಟ್ಟಿದ್ದಾರೆ ಎಂದು ಸರ್ಕಾರಿ ಆಸ್ಪತ್ರೆ ವೈದ್ಯರು ಹೇಳಿದ್ದಾರೆ. ಹೀಗಾಗಿ ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ಕಳುಹಿಸಿದ್ದರು.

ಇನ್ನೇನು ಪೋಸ್ಟ್ ಮಾರ್ಟಮ್ ಮಾಡಬೇಕೆಂದು ಮುಂದಾದಾಗ ಶವಾಗಾರದ ವೈದ್ಯರಿಗೆ ಶವದ ಕೈಕಾಲು ಅಲುಗಾಡುತ್ತಿರುವುದು ಕಂಡು ಬಂದಿದೆ. ಶಾಕ್ ಆದ ವೈದ್ಯರು ಪರೀಕ್ಷಿಸಿದಾಗ ವ್ಯಕ್ತಿ ಬದುಕಿದ್ದಾರೆ. ತಕ್ಷಣ ಅವರನ್ನು ಮಹಾಲಿಂಗಪುರ ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಶಂಕರ್ ಗೊಂಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತಿದ್ದಾರೆ.


Spread the love

About Laxminews 24x7

Check Also

ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಬಿಗ್ ಶಾಕ್ :ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆ

Spread the loveಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಲ್ಬುರ್ಗಿ ಜಿಲ್ಲೆಯ ವಿಜಯಪುರ ತಾಲ್ಲೂಕಿನ ಬಿಜೆಪಿಯ ಪರಾಜಿತ ಅಭ್ಯರ್ಥಿ ಮಲಿಕಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ