Home / ನವದೆಹಲಿ / N-95 ಮಾಸ್ಕ್‌ ಧಾರಣೆಯಿಂದ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಸಾಧ್ಯವಿಲ್ಲ ಎಂದು ಎಚ್ಚರಿಸಿದೆ. ಕೇಂದ್ರ ಸರ್ಕಾರ

N-95 ಮಾಸ್ಕ್‌ ಧಾರಣೆಯಿಂದ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಸಾಧ್ಯವಿಲ್ಲ ಎಂದು ಎಚ್ಚರಿಸಿದೆ. ಕೇಂದ್ರ ಸರ್ಕಾರ

Spread the love

ಹೊಸದಿಲ್ಲಿ: ಮಾರಕ ಕೊರೊನಾ ವೈರಸ್ ಹಾವಳಿಯ ಸಂದರ್ಭದಲ್ಲಿ ಎಲ್ಲರೂ ಫೇಸ್ ಮಾಸ್ಕ್ ಮೊರೆ ಹೋಗಿರುವುದು ಸಾಮಾನ್ಯ ಸಂಗತಿಯಾಗಿದೆ. ಸರ್ಕಾರ ಖುದ್ದು ಫೇಸ್ ಮಾಸ್ಕ್ ಧರಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಅದರಂತೆ ಸದ್ಯ ದೇಶದಲ್ಲಿ ವಿವಿಧ ರೀತಿಯ ಫೇಸ್ ಮಾಸ್ಕ್‌ಗಳು ಬಳಕೆಯಲ್ಲಿದ್ದು, ಅವುಗಳಲ್ಲಿ N-95 ಮಾಸ್ಕ್ ಅತ್ಯಂತ ಜನಪ್ರಿಯವಾಗಿವೆ. ಭಾರೀ ಸಂಖ್ಯೆಯಲ್ಲಿ N-95 ಮಾಸ್ಕ್‌ಗಳನ್ನು ಜನ ಖರೀದಿಸಿದ್ದಾರೆ.
ಆದರೆ N-95 ಮಾಸ್ಕ್‌ ಕುರಿತು ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ರಂಧ್ರಗಳಿರುವ N-95 ಮಾಸ್ಕ್‌ ಧಾರಣೆಯಿಂದ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಸಾಧ್ಯವಿಲ್ಲ ಎಂದು ಎಚ್ಚರಿಸಿದೆ.
ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯದ ಆರೋಗ್ಯ ಸೇವೆಗಳ ಮಹಾ ನಿರ್ದೇಶಕ ರಾಜೀವ್ ಗರ್ಗ್, ಎಲ್ಲಾ ರಾಜ್ಯಗಳ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣದ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.
ರಂಧ್ರಗಳಿರುವ N-95 ಮಾಸ್ಕ್ ಧರಿಸುವುದರಿಂದ ಕೊರೊನಾ ವೈರಸ್ ದೇಹದೊಳಗೆ ಸೇರುವುದನ್ನು ಅಥವಾ ಸೋಂಕಿತ ವ್ಯಕ್ತಿಯ ದೇಹದಿಂದ ಹೊರಗೆ ಬರುವುದನ್ನು ತಪ್ಪಿಸಲಾಗದು ಎಂದು ಕೇಂದ್ರ ಎಚ್ಚರಿಸಿದೆ.
ರಂಧ್ರಗಳಿರುವ N-95 ಮಾಸ್ಕ್ ಧರಿಸುವುದರಿಂದ ವೈರಾಣು ಹೊದ ಬರುವುದನ್ನು ತಪ್ಪಿಸಲಾಗುವುದಿಲ್ಲ ಎಂದಿರುವ ಕೇಂದ್ರ ಆರೋಗ್ಯ ಇಲಾಖೆ, N-95 ಮಾಸ್ಕ್ ಸರಿಯಾದ ಬಳಕೆಗೆ ಮಾರ್ಗಸೂಚಿ ಅಗತ್ಯವಿದೆ ಎಂದು ಹೇಳಿದೆ.
ಈ ಹಿನ್ನೆಲೆಯಲ್ಲಿ N-95 ಮಾಸ್ಕ್‌ಗಳ ಅನುಚಿತ ಬಳಕೆಯನ್ನು ತಡೆಯಲು ಸೂಕ್ತ ಮಾರ್ಗಸೂಚಿಗಳನ್ನು ಜಾರಿಗೊಳಿಸುವಂತೆ ರಾಜೀವ್ ಗರ್ಗ್ ಬರೆದಿರುವ ಪತ್ರದಲ್ಲಿ ಸ್ಪಷ್ಟ ಸೂಚನೆ ನೀಡಲಾಗಿದೆ.

Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ