Breaking News

ಸಿಲಿಂಡರ್ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್!

Spread the love

ತುಮಕೂರು : ಈಗಾಗಲೇ ಸಿಲಿಂಡರ್ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಅಡುಗೆ ಅನಿಲ ಸಿಲಿಂಡರ್ ತೂಕದಲ್ಲಿ ಮೋಸ ನಡೆಯುತ್ತಿದ್ದು, ತೂಕ ಪರೀಕ್ಷಿಸಿ ಪಡೆದುಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಶಿರಾ ತಾಲೂಕಿನಲ್ಲಿ ಹಾಡಹಾಗಲೇ ಕಡಿಮೆ ತೂಕದ ಅಡುಗೆ ಅನಿಲ ಪೂರೈಸುತ್ತಿರುವುದನ್ನು ಖುದ್ದು ಗ್ರಾಹಕರೇ ಪತ್ತೆ ಹಚ್ಚಿದ್ದಾರೆ. ಕಡಿಮೆ ತೂಕ ಹೊಂದಿದ್ದ ಅಡುಗೆ ಅನಿಲ ಸಿಲಿಂಡರ್ ಗಳೊಂದಿಗೆ ಗ್ರಾಹಕರು ಪ್ರತಿಭಟನೆ ನಡೆಸಿದ್ದಾರೆ.

ಶಿರಾ ನಗರದ ಸಿಲಿಂಡರ್ ವಿತರಕರಿಂದ ಗ್ರಾಹಕರಿಗೆ ನೀಡಿದ್ದ ಸಿಲಿಂಡರ್ ಬರೋಬ್ಬರಿ 750 ಕಡಿಮೆ ತೂಕ ಇದ್ದದ್ದು ಕಂಡು ಬಂದಿದ್ದು, ಹಲವು ಸಿಲಿಂಡರ್ ಗಳನ್ನು ಪರಿಶೀಲನೆ ನಡೆಸಿದಾಗ ತೂಕ ಕಡಿಮೆ ಇರುವುದು ಪತ್ತೆಯಾಗಿದೆ. ಇದರಿಂದ ಗ್ರಾಹಕರು ಸಿಲಿಂಡರ್ ವಾಹನ ತಡೆದು ಪ್ರತಿಭಟನೆ ನಡೆಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ