ಬೆಂಗಳೂರು: ನಟಿ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಸಹಿತ 25 ಮಂದಿ ವಿರುದ್ಧ ಅಂತಾರಾಷ್ಟ್ರೀಯ ಡ್ರಗ್ಸ್ ಜಾಲ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ಸಿಸಿಬಿ ಪೊಲೀಸರು ಡ್ರಗ್ಸ್ ಪ್ರಕರಣದಲ್ಲಿ ಹಲವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಕೆಲವರು ಜಾಮೀನು ಪಡೆದು ಹೊರ ಬಂದಿದ್ದಾರೆ. ತನಿಖೆ ಪೂರ್ಣಗೊಳಿಸಿರುವ ಪೊಲೀಸರು ನ್ಯಾಯಾಲಯಕ್ಕೆ 2900 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿರುವರು.
ರಾಗಿಣಿ, ಸಂಜನಾ ಸಹಿತ 25 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಇದರಲ್ಲಿ ಮೂರು ಮಂದಿ ತಲೆಮರೆಸಿಕೊಂಡಿರುವರು.
Laxmi News 24×7