Breaking News
Home / ಜಿಲ್ಲೆ / ಬೆಂಗಳೂರು / ಕಂತೆ ಕಂತೆ ನೋಟು ಪತ್ತೆ! ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರ ಬಂಧನ

ಕಂತೆ ಕಂತೆ ನೋಟು ಪತ್ತೆ! ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರ ಬಂಧನ

Spread the love

ವಿಶಾಖಪಟ್ಟಣಂ: ಸುಮಾರು 7.9 ಕೋಟಿ ರೂ. ಮೌಲ್ಯದ ನಕಲಿ ಹಣ ಹೊಂದಿದ್ದ ಇಬ್ಬರು ಆರೋಪಿಗಳನ್ನು ಆಂಧ್ರ ಪ್ರದೇಶ-ಒಡಿಶಾ ಗಡಿಯ ಸುಂಕಿ ಔಟ್​ಪೋಸ್ಟ್​ನಲ್ಲಿ ಪೊಲೀಸರು ಬಂಧಿಸಿ, ಹಣವನ್ನು ವಶಕ್ಕೆ ಪಡೆದಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ ಆರೋಪಿಗಳು ಅಂತಾರಾಜ್ಯ ದಂಧೆಕೋರರು ಎಂಬುದಾಗಿ ತಿಳಿದುಬಂದಿದೆ. ಅವರಿಬ್ಬರು ಛತ್ತೀಸ್​ಗಢದ ರಾಯ್ಪುರದಿಂದ ಆಂಧ್ರದ ವಿಶಾಖಪಟ್ಟಣಂ ಬರುವಾಗ ಮಾರ್ಗ ಮಧ್ಯೆಯೇ ಬಂಧಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ಸುಂಕಿ ಔಟ್​ಪೋಸ್ಟ್​ನಲ್ಲಿ ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ 500 ರೂ. ನೋಟಿನ ಕಂತೆಗಳ ಒಟ್ಟು 7.9 ಕೋಟಿ ರೂ. ನಕಲಿ ಹಣ ಪತ್ತೆಯಾಗಿದೆ.

 

ಇನ್ನು ಆಂಧ್ರದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಸಹ ಘೋಷಣೆಯಾಗಿದ್ದು, ಮಾರ್ಚ್​ 10ರಂದು ಮತದಾನ ನಡೆಯಲಿದೆ. ಇದರ ಬೆನ್ನಲ್ಲೇ ನಕಲಿ ಹಣ ಪತ್ತೆಯಾಗಿರುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಇದೀಗ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) 489ಎ, 489ಬಿ, 489ಸಿ ಮತ್ತು 120ಬಿ ಸೆಕ್ಷನ್​ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳು ಪೊಲೀಸ್​ ಕಸ್ಟಡಿಯಲ್ಲಿದ್ದು, ತನಿಖೆ ಆರಂಭವಾಗಿದೆ. ಇದೇ ವೇಳೆ ಆಂಧ್ರ, ಛತ್ತೀಸ್​ಗಢ ಮತ್ತು ಒಡಿಶಾ ಮೂರು ರಾಜ್ಯಗಳ ಪೊಲೀಸರು ತಂಡವೊಂದನ್ನು ರಚಿಸಿ ಗ್ಯಾಂಗ್​ನ ಉಳಿದ ಸದಸ್ಯರಿಗಾಗಿ ಬಲೆ ಬೀಸಿದೆ.

 


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ