ರಾಮನಗರ ಜೂ.30-ಅಗಸರು ಹಾಗೂ ಕ್ಷೌರಿಕರಿಗೆ ಕೋವಿಡ್-19ರ ಲಾಕ್‌ಡೌನ್ ಕಾರಣ 5000 ರೂ.ಗಳ ಪರಿಹಾರ ನೆರವು ಪಡೆಯಲು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಗಡುವನ್ನು ಜುಲೈ 10ರ ವರೆಗೆ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವನ್ನಾಗಿ ನಿಗದಿಪಡಿಸಲಾಗಿತ್ತು. ಆದರೆ, ಈ ಸಂಬಂಧ ರಾಮನಗರ ಜಿಲ್ಲೆಯ 04 ತಾಲ್ಲೂಕುಗಳಿಂದ ಇಲ್ಲಿಯವರೆಗೂ 1041 ಅರ್ಜಿಗಳು ಮಾತ್ರ ಆನ್‌ಲೈನ್ ಅಲ್ಲಿ ಸ್ವೀಕೃತಗೊಂಡಿವೆ.ಈ ವೃತ್ತಿಯಲ್ಲಿ ಯಾವುದೇ ಅಗಸ, ಕ್ಷೌರಿಕ ವೃತ್ತಿ ನಿರ್ವಹಿಸುತ್ತಿರುವ ಕಾರ್ಮಿಕರು ಅರ್ಜಿ ಸಲ್ಲಿಸಲಾಗದೆ ಪರಿಹಾರದಿಂದ ವಂಚಿತರಾಗಬಾರದು ಎಂಬ ಕಾರಣದಿಂದ ಒಂದು ಬಾರಿ ಪರಿಹಾರವಾಗಿ 5000 ರೂ.ಗಳ ಪರಿಹಾರಕ್ಕೆ ಸೇವಾಸಿಂಧು ವೆಬ್ ಸೈಟ್ ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 10ರ ವರೆಗೆ ವಿಸ್ತರಿಸಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಶೇಖರ್ ಗಢದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 Laxmi News 24×7
Laxmi News 24×7
				 
		 
						
					 
						
					 
						
					