ಉಡುಪಿ: ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಒಂದನೇ ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶರಿಗೆ ಕೊರೋನಾ ಪಾಸಿಟಿವ್ ಬಂದಿದೆ ಎಂದು ವೈದ್ಯಕೀಯ ಮೂಲಗಳು ಮಾಹಿತಿ ನೀಡಿದೆ.
ಉಡುಪಿ ನಗರದ ಒಳಗಿರುವ ನ್ಯಾಯಾಲಯದ ಒಂದು ವಿಭಾಗವನ್ನು ಸದ್ಯ ಸೀಲ್‍ಡೌನ್ ಮಾಡಲಾಗಿದೆ ಎಂದು ಮಾಹಿತಿ ಇದೆ. ಮುಂದಿನ ಎರಡು ದಿನ ಉಡುಪಿ ಜಿಲ್ಲಾ ನ್ಯಾಯಾಲಯದ ಒಳಗೆ ಯಾವುದೇ ಚಟುವಟಿಕೆಗಳು ನಡೆಯುವುದಿಲ್ಲ ಸಂಪೂರ್ಣ ಸ್ಯಾನಿಟೈಸ್ ಪ್ರಕ್ರಿಯೆಯನ್ನು ಮಾಡಲಾಗುವುದು. ನ್ಯಾಯಾಧೀಶರ ಸಂಪರ್ಕಕ್ಕೆ ಬಂದ ಎಲ್ಲಾ ಸಿಬ್ಬಂದಿಗಳಿಗೆ ಕ್ವಾರಂಟೈನ್ ಆಗಲು ಸೂಚನೆ ನೀಡಲಾಗಿದೆ ಎಂಬ ಮಾಹಿತಿ ಲಭಿಸಿದೆ.ನ್ಯಾಯಾಲದ ಸೆಲ್ ಎರಡು ದಿನ ಸೀಲ್ ಮಾಡಿ, ಸಂಪೂರ್ಣ ಸ್ಯಾನಿಟೈಸ್ ಮಾಡಲಾಗುವುದು. ಸಿಬ್ಬಂದಿಗಳ ವೈದ್ಯಕೀಯ ಪರೀಕ್ಷೆ ಮಾಡುತ್ತೇವೆ. ಉಳಿದಂತೆ ನ್ಯಾಯಾಲಯಕ್ಕೆ ಬಂದವರಲ್ಲಿ ಕೊರೊನಾ ಲಕ್ಷಣ ಕಂಡು ಬಂದರೆ ಮಾಹಿತಿ ನೀಡಬೇಕು ಎಂದು ಡಿಎಚ್‍ಒ ಡಾ.ಸುಧೀರ್ ಚಂದ್ರ ಹೇಳಿದ್ದಾರೆ.
Laxmi News 24×7