Breaking News
Home / ಜಿಲ್ಲೆ / ಉಡುಪಿ / ನ್ಯಾಯಾಧೀಶರಿಗೆ ಕೊರೊನಾ- ಉಡುಪಿ ಕೋರ್ಟ್ 2 ದಿನ ಸೀಲ್‍ಡೌನ್

ನ್ಯಾಯಾಧೀಶರಿಗೆ ಕೊರೊನಾ- ಉಡುಪಿ ಕೋರ್ಟ್ 2 ದಿನ ಸೀಲ್‍ಡೌನ್

Spread the love

ಉಡುಪಿ: ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಒಂದನೇ ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶರಿಗೆ ಕೊರೋನಾ ಪಾಸಿಟಿವ್ ಬಂದಿದೆ ಎಂದು ವೈದ್ಯಕೀಯ ಮೂಲಗಳು ಮಾಹಿತಿ ನೀಡಿದೆ.

ಉಡುಪಿ ನಗರದ ಒಳಗಿರುವ ನ್ಯಾಯಾಲಯದ ಒಂದು ವಿಭಾಗವನ್ನು ಸದ್ಯ ಸೀಲ್‍ಡೌನ್ ಮಾಡಲಾಗಿದೆ ಎಂದು ಮಾಹಿತಿ ಇದೆ. ಮುಂದಿನ ಎರಡು ದಿನ ಉಡುಪಿ ಜಿಲ್ಲಾ ನ್ಯಾಯಾಲಯದ ಒಳಗೆ ಯಾವುದೇ ಚಟುವಟಿಕೆಗಳು ನಡೆಯುವುದಿಲ್ಲ ಸಂಪೂರ್ಣ ಸ್ಯಾನಿಟೈಸ್ ಪ್ರಕ್ರಿಯೆಯನ್ನು ಮಾಡಲಾಗುವುದು. ನ್ಯಾಯಾಧೀಶರ ಸಂಪರ್ಕಕ್ಕೆ ಬಂದ ಎಲ್ಲಾ ಸಿಬ್ಬಂದಿಗಳಿಗೆ ಕ್ವಾರಂಟೈನ್ ಆಗಲು ಸೂಚನೆ ನೀಡಲಾಗಿದೆ ಎಂಬ ಮಾಹಿತಿ ಲಭಿಸಿದೆ.ನ್ಯಾಯಾಲದ ಸೆಲ್ ಎರಡು ದಿನ ಸೀಲ್ ಮಾಡಿ, ಸಂಪೂರ್ಣ ಸ್ಯಾನಿಟೈಸ್ ಮಾಡಲಾಗುವುದು. ಸಿಬ್ಬಂದಿಗಳ ವೈದ್ಯಕೀಯ ಪರೀಕ್ಷೆ ಮಾಡುತ್ತೇವೆ. ಉಳಿದಂತೆ ನ್ಯಾಯಾಲಯಕ್ಕೆ ಬಂದವರಲ್ಲಿ ಕೊರೊನಾ ಲಕ್ಷಣ ಕಂಡು ಬಂದರೆ ಮಾಹಿತಿ ನೀಡಬೇಕು ಎಂದು ಡಿಎಚ್‍ಒ ಡಾ.ಸುಧೀರ್ ಚಂದ್ರ ಹೇಳಿದ್ದಾರೆ.


Spread the love

About Laxminews 24x7

Check Also

ಬಾಲಕಿಗೆ ಪ್ರೀತಿಸುವಂತೆ ಕಿರುಕುಳ : ಮೆಸ್ಕಾಂ ಸಿಬ್ಬಂದಿ ಪೊಲೀಸರ ವಶಕ್ಕೆ

Spread the loveಪುತ್ತೂರು(ಡಿಸೆಂಬರ್​. 22): ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಸವಣೂರು ಸಮೀಪದ‌ ನಿವಾಸಿಯಾಗಿರುವ ಪಿಯುಸಿ ಓದುತ್ತಿರುವ ಬಾಲಕಿಗೆ ಸಾಮಾಜಿಕ ಜಾಲತಾಣದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ